ಮೈಸೂರಿನಲ್ಲಿ ಉಪೇಂದ್ರ ವಿರುದ್ಧ ಪ್ರತಿಭಟನೆ

Upendra (4)
Published on

ಮೈಸೂರು: ನಟ ಉಪೇಂದ್ರ ದಲಿತರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದು, ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ರಾಜ್ಯ ಸಂಶೋಧಕರ ವೇದಿಕೆ, ದಲಿತ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟದಿಂದ ಗುರುವಾರ ಮಾನಸಗಂ ಗೋತ್ರಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.

ದಲಿತರ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಉಪೇಂದ್ರ ನಂತರ ಕ್ಷಮೆ ಕೋರಿದ್ದಾರೆ. ಆದರೆ, ಅವರ ಮಾತನ್ನು ಕ್ಷಮಿಸಲು ಸಾಧ್ಯವಿಲ್ಲ. ಹೀಗಾಗಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಲಾಯಿತು. ಅದೇ ರೀತಿ ಜಾತಿ ನಿಂದನೆ ಮಾಡಿದ ತೋಟಗಾರಿಕಾ ಸಚಿವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಸರ್ಕಾರ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾ ಯಿತು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ರಾಜೇಶ್ ಚಾಕನಹಳ್ಳಿ, ಪರಂಜ್ಯೋತಿ, ರಾಜೇಂದ್ರಸಿಂಗ್ ಬಾಬು, ಕವಿರಾಜ್, ಕಾಂತರಾಜ್, ಅಭಿ, ಚೇತನ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net