ಬಾಂಗ್ಲಾ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ವಿರಾಜಪೇಟೆಯ ಗಡಿಯಾರ ಕಂಬದ ಬಳಿ ಹಿಂದು ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಸುಜಾ ಕುಶಾಲಪ್ಪ , ವಿವೇಕ್, ಹೇಮಂತ್, ಶಶಿ ಸುಬ್ರಮಣಿ,ಪಟ್ರಪಂಡ ರಘು ನಾಣಯ್ಯ ಇದ್ದರು.
ವಿರಾಜಪೇಟೆಯ ಗಡಿಯಾರ ಕಂಬದ ಬಳಿ ಹಿಂದು ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಸುಜಾ ಕುಶಾಲಪ್ಪ , ವಿವೇಕ್, ಹೇಮಂತ್, ಶಶಿ ಸುಬ್ರಮಣಿ,ಪಟ್ರಪಂಡ ರಘು ನಾಣಯ್ಯ ಇದ್ದರು.
Published on

ವಿರಾಜಪೇಟೆ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಇಲ್ಲಿನ ಗಡಿಯಾರ ಕಂಬದ ಬಳಿ ಹಿಂದು ಹಿತರಕ್ಷಣಾ ಸಮಿತಿ ಸದಸ್ಯರು ಸೋಮವಾರ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಬಾಂಗ್ಲಾದೇಶದಲ್ಲಿ ಹಿಂದುಗಳಿಗೆ ಭದ್ರತೆ ಇಲ್ಲದಾಗಿದೆ. ಅಲ್ಲಿ ಹಿಂದುಗಳ ಜನಸಂಖ್ಯೆ 18% ದಿಂದ 8%ಕ್ಕೆ ಇಳಿದಿದೆ. ಶೇಖ್ ಹಸೀನಾ ಆಡಳಿತದಲ್ಲಿ ಅನ್ಯೋನ್ಯ ಜೀವನವನ್ನು ಜನರು ಮಾಡುತ್ತಿದ್ದರು. ಆದರೀಗ ಆ ರಾಷ್ಟ್ರದಲ್ಲಿ ಬಹುಸಂಖ್ಯಾತರಿಂದ ಅಲ್ಪಸಂಖ್ಯಾತ ಹಿಂದುಗಳ ಮೇಲೆ ದೌರ್ಜನ್ಯ, ಕಿರುಕುಳ ಹಾಗೂ ಹತ್ಯೆಯಾಗುತ್ತಿದೆ ಎಂದು ಕಿಡಿಕಾರಿದರು.

ಈ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿ ಅಲ್ಲಿನ ಹಿಂದುಗಳನ್ನು ರಕ್ಷಿಸಬೇಕು. ಜತೆಗೆ ಪ್ರಧಾನಿ ಮೋದಿ ಬಾಂಗ್ಲಾದೇಶದ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.

ಭಾಜಪ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಹಿಂದು ಸಂಘಟನೆಗಳ ಪ್ರಮುಖರಾದ ಕುಟ್ಟಂಡ ಪ್ರಿನ್ಸ್ ಗಣಪತಿ, ವಿವೇಕ್ ರೈ, ಹೇಮಂತ್, ಭಾಜಪ ಮುಖಂಡರಾದ ಶಶಿ ಸುಬ್ರಮಣಿ, ಪಟ್ರಪಂಡ ರಘು ನಾಣಯ್ಯ ಪುರಸಭಾ ಭಾಜಪ ಸದಸ್ಯರು, ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net