ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

kundana protest
protest at dc office
Published on

ವಿಜಯವಾಣಿ ಸುದ್ದಿಜಾಲ ಕುಂದಾಣ
ನ್ಯಾ.ಕಾಂತರಾಜು ಆಯೋಗ ಹಾಗೂ ಸದಾಶಿವ ಆಯೋಗದ ವರದಿ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಕಾರ್ಯದರ್ಶಿ ನಂದಿಗುಂದ ಪಿ.ವೆಂಕಟೇಶ್ ಒತ್ತಾಯಿಸಿದರು.
ದೇವನಹಳ್ಳಿಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7.5 ಕ್ಕೇರಿಸಬೇಕೆಂದು ಶಿಫಾರಸು ಮಾಡಿರುವ ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿ ಸಚಿವ ಸಂಪುಟದಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವುದು ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ಅಗತ್ಯ ಮೂಲ ಸೌಕರ್ಯಗಳಿಗೆ ಸರ್ಕಾರ ಮನ್ನಣೆ ನೀಡಬೇಕು ಎಂದು ಒತ್ತಾಯಿಸಿದರು.
ಕಾಂತರಾಜು ಆಯೋಗದ ವರದಿ ಅಂಗೀಕಾರಕ್ಕೆ ಲಿಂಗಾಯತ, ಒಕ್ಕಲಿಗರು ಪರೋಕ್ಷವಾಗಿ ತಡೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದರು. ಸಮ್ಮಿಶ್ರ ಹಾಗೂ ಬಿಜೆಪಿ ಸರ್ಕಾರಗಳೆರಡೂ ವರದಿ ಜಾರಿಗೆ ಮುಂದಾಗಲಿಲ್ಲ. ಕಾಂಗ್ರೆಸ್ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎರಡೂ ವರದಿಗಳನ್ನು ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಸರ್ಕಾರ ರಚನೆಯಾಗಿ ಆರು ತಿಂಗಳಾಗುತ್ತಾ ಬಂದರೂ ಈ ಬಗ್ಗೆ ಏನೂ ಮಾಡುತ್ತಿಲ್ಲ. ಕೂಡಲೇ ಸರ್ಕಾರ ಜಾರಿಗೆ ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಎಲ್ಲ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಆದ್ದರಿಂದ ಒಳ ಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net