ಮಾ.4 ರಂದು ತಾಯಿ, ಮಕ್ಕಳ ಆಸ್ಪತ್ರೆಗೆ ಹೋರಾಟ

25 feb tnp 01
ತಿ.ನರಸೀಪುರ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕಾಗಿ ಹೋರಾಟ ಸಮಿತಿಯ ಸಭೆ ಆಯೋಜಿಸಲಾಗಿತ್ತು. ಆಲಗೂಡು ಶಿವಕುಮಾರ್, ಕುಕ್ಕೂರು ರಾಜು, ಮೋಹನ್ ಕುಮಾರಿ, ಕೋಮಲಾಕ್ಷಿ, ರೇಖಾ, ಶಶಿಕಲಾ, ಸುರೇಶ್, ಸ್ವಾಮಿ, ರೂಪಶ್ರೀ ಇತರರಿದ್ದರು.
Published on

ತಿ.ನರಸೀಪುರ: ಗ್ರಾಮೀಣ ಪ್ರದೇಶಗಳ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಪಟ್ಟಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ತೆರೆಯುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹೋರಾಟ ರೂಪಿಸಲು ನಿರ್ಧರಿಸಲಾಯಿತು.

ಡಾ.ಅಂಬೇಡ್ಕರ್ ಭವನದಲ್ಲಿ ಸೋಮವಾರ ತಾಯಿ ಮಗು ಆರೈಕೆ ಮತ್ತು ಹೆರಿಗೆ ಆಸ್ಪತ್ರೆ ನಿರ್ಮಾಣ ಹೋರಾಟ ಸಮಿತಿಯಿಂದ ಹೋರಾಟದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ತಾಲೂಕು ಕೇಂದ್ರದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕಾಗಿ ಆಡಳಿತರೂಢ ಸರ್ಕಾರವನ್ನು ಒತ್ತಾಯಿಸುವುದು ಅನಿವಾರ್ಯವಾಗಿದ್ದು, ಅದಕ್ಕಾಗಿ ತಾಯಿ ಮಗು ಆರೈಕೆ ಮತ್ತು ಹೆರಿಗೆ ಆಸ್ಪತ್ರೆ ನಿರ್ಮಾಣ ಹೋರಾಟ ಸಮಿತಿ ಹೆಸರಿಗೆ ಅಧಿಕೃತ ಅನುಮೋದನೆ ನೀಡಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಮೋಹನ್ ಕುಮಾರಿ, ಉಪಾಧ್ಯಕ್ಷರಾಗಿ ಕೋಮಲಾಕ್ಷಿ, ಪ್ರಧಾನ ಕಾರ್ಯದರ್ಶಿಯಾಗಿ ರೇಖಾ, ಕಾರ್ಯದರ್ಶಿಯಾಗಿ ಶಶಿಕಲಾ, ಸಂಚಾಲಕರಾಗಿ ಸುರೇಶ್, ಸ್ವಾಮಿ, ರೂಪಶ್ರೀ, ಮಣಿಲಾ, ಕುಕ್ಕೂರು ರಾಜು ಮತ್ತು ಆಲಗೂಡು ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲದೆ ಮಾ.4ರಂದು ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕಾಗಿ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ತಾಲೂಕು ತಹಸೀಲ್ದಾರ್ ಕಚೇರಿಯಿಂದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿವರೆಗೆ ಬೃಹತ್ ಜಾಥಾ ಮತ್ತು ಸಹಿ ಸಂಗ್ರಹ ಆಂದೋಲನ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಯುವ ಮುಖಂಡರಾದ ಬನ್ನಹಳ್ಳಿಹುಂಡಿ ಉಮೇಶ್, ಆಲಗೂಡು ನಾಗರಾಜ್ ಮೂರ್ತಿ, ಶಾಂತಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net