ಬೃಂದಾವನ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ

oppo_2
ಕೆ.ಆರ್.ಸಾಗರ ಅಣೆಕಟ್ಟೆಯ 20 ಕಿ.ಮೀ ವ್ಯಾಪ್ತಿಯಲ್ಲಿ ರೈತರ ವಿರೋಧನಡುವೆಯು ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವುದು ಸರಿಯಲ್ಲ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ಕೆ.ಆರ್.ಸಾಗರ ಬೃಂದಾವನ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದ ಚಿತ್ರ.
Published on

ಕೆ.ಆರ್.ಸಾಗರ: ಕೆ.ಆರ್.ಸಾಗರ ಅಣೆಕಟ್ಟೆಯ ಭದ್ರತೆ ಬಲಿಕೊಟ್ಟು ಟ್ರಯಲ್ ಬ್ಲಾಸ್ಟ್ ಮಾಡವುದಿಲ್ಲ ಎಂದು ಹೇಳಿ ಮಾತು ಬದಲಿಸಿದ ಅಧಿಕಾರಿಗಳು ಟ್ರಯಲ್ ಬ್ಲಾಸ್ಟ್ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಕೆ.ಆರ್.ಸಾಗರ ಬೃಂದಾವನ ಪ್ರವೇಶ ದ್ವಾರದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ತಜ್ಞರ ಸಮಿತಿಗೆ ವರದಿ ನೀಡದೆ ಏಕಪಕ್ಷೀಯವಾಗಿ ನ್ಯಾಯಾಲಯಕ್ಕೆ ಟ್ರಯಲ್ ಬ್ಲಾಸ್ಟ್ ಮಾಡುವುದಾಗಿ ತಿಳಿಸಿ, ಅಣೆಕಟ್ಟೆ ಹಾಗೂ ರೈತರ ಬಲಿ ಕೊಡಲು ಸಿದ್ಧರಾಗಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಪೊಲೀಸರ ಭದ್ರತೆ ಪಡೆದು ಐದಾರು ಕ್ವಾರಿಗಳಲ್ಲಿ ಕುಳಿ ತೋಡುತ್ತಿದ್ದಾರೆ. ಜಿಲ್ಲಾಡಳಿತ ಗಣಿ ಮಾಲೀಕರ ಪ್ರಭಾವಕ್ಕೆ ಒಳಗಾಗಿ ಈ ಕ್ರಮ ತೆಗೆದುಕೊಂಡಿದೆ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆರೋಪಿಸಿದರು.
ಕದ್ದು ಮುಚ್ಚಿ ಕುಳಿ ತೋಡಿ, ಟ್ರಯಲ್ ಬ್ಲಾಸ್ಟ್ ಮಾಡುವ ಪ್ರಯತ್ನ ಮಾಡಿದರೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ. ತಜ್ಞರು ಯಾವುದೇ ಕಾರಣಕ್ಕೂ ಆಗಮಿಸಬಾರದು. ಗಣಿ ಮಾಲೀಕರ ಲಾಭಿಗೆ ಜಿಲ್ಲಾಡಳಿತ ಮಣಿದಿದೆ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಕೆಂಪೂಗೌಡ, ಸವೊರ್ರ್ದಯ ಕರ್ನಾಟಕ ಪಕ್ಷದ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ, ಮುಖಂಡರಾದ ಪ್ರೊ.ಹುಲ್ಕರೆ ಮಹದೇವು, ನ್ಯಾಯವಾದಿ ಬಸವರಾಜು, ಪಾಂಡು, ಪ್ರಕಾಶ್, ಜಗದೀಶ್, ಶಂಭೂಗೌಡ, ಪ್ರಿಯಾ ರಮೇಶ್, ರೈತಸಂಘ, ವಿವಿಧ ಸಂಘಟನೆಗಳ ಮುಖಂಡರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net