ಗುಳೇದಗುಡ್ಡದಲ್ಲಿ ಎಬಿವಿಪಿಯಿಂದ ಪ್ರತಿಭಟನೆ

gld6-1 pro
ಗುಳೇದಗುಡ್ಡ ಪಟ್ಟಣದಲ್ಲಿ ಬಸ್ ಪ್ರಯಾಣದರ ಹೆಚ್ಚಳ ಮಾಡಿದ್ದನ್ನು ವಿರೋಧಿಸಿ ಎಬಿವಿಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ವಿಶೇಷ ತಹಸೀಲ್ದಾರ್ ಮಹೇಶ ಗಸ್ತೆ ಅವರಿಗೆ ಮನವಿ ಸಲ್ಲಿಸಲಾಯಿತು. ಹರ್ಷ ನಾಯಕ, ರವಿ ಉಪ್ಪಾರ, ಗೌರೀಶ ಖೋತ, ಅಮೀತ ವಾಳದ, ಅಪ್ಪು ಚವಾಣ, ಪ್ರವೀಣ ರಾಠೋಡ, ಮೈತ್ರಿ ರಾಜನಾಳ, ಮಂಜು ರಾಠೋಡ, ಶಶಾಂಕ ಸಿಂದಗಿ ಮತ್ತಿತರರಿದ್ದರು.
Published on

ಗುಳೇದಗುಡ್ಡ: ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಎಬಿವಿಪಿ ಸಂಘಟನೆ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ವಿಶೇಷ ತಹಸೀಲ್ದಾರ್ ಮಹೇಶ ಗಸ್ತೆ ಅವರಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ಬಸ್‌ಗಳನ್ನೇ ಅವಲಂಬಿಸಿ ಹಲವಾರು ಜನರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಪ್ರಯಾಣಿಸುತ್ತಿದ್ದು, ದರ ಹೆಚ್ಚಳದಿಂದ ಆರ್ಥಿಕಹೊರೆಯಾಗಿದೆ. ಶಕ್ತಿ ಯೋಜನೆಯಿಂದಾಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದು ಸರ್ಕಾರದ ಗಮನಕ್ಕಿದ್ದರೂ ಬಸ್‌ಗಳ ಸಂಖ್ಯೆ ಹೆಚ್ಚಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್‌ನಲ್ಲಿ ಸ್ಥಳಾವಕಾಶವಿಲ್ಲದ ಹಿನ್ನೆಲೆ ಕೆಲ ನಿಲ್ದಾಣಗಳಲ್ಲಿ ಬಸ್ ನಿಲ್ಲಿಸುತ್ತಿಲ್ಲ. ಇದರಿಂದ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಕೂಡಲೇ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಹರ್ಷ ನಾಯಕ, ರವಿ ಉಪ್ಪಾರ, ಗೌರೀಶ ಖೋತ, ಅಮೀತ ವಾಳದ, ಅಪ್ಪು ಚವಾಣ್, ಪ್ರವೀಣ ರಾಠೋಡ, ಮೈತ್ರಿ ರಾಜನಾಳ, ಮಂಜು ರಾಠೋಡ, ಶಶಾಂಕ ಸಿಂದಗಿ, ಆಕಾಶ ತಿಪ್ಪಾ, ಪ್ರಥಮೇಶ ಪವಾರ, ಸುದೀಪ ದಿಂಡಿ ಮತ್ತಿತರರು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net