ಅಂಬೇಡ್ಕರ್ ಸೇನೆಯಿಂದ ಪ್ರತಿಭಟನೆ

5
Published on

ಮೈಸೂರು: ಮುಂಬೈನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮನೆ ಮೇಲಿನ ದಾಳಿ ಖಂಡಿಸಿ ಅಂಬೇಡ್ಕರ್ ಸೇನೆ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಇದೊಂದು ಪೂರ್ವ ನಿಯೋಜಿತ ಕೃತ್ಯ. ದೇಶದ ಪ್ರಜೆಗಳ ಭಾವನೆಯನ್ನು ಕೆರಳಿಸುವಂತಹ ಘಟನೆ ಇದಾಗಿದ್ದು, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಂಬೇಡ್ಕರ್ ನಿವಾಸಕ್ಕೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ನಾಗೇಂದ್ರ ಬಸವಟ್ಟಿಗೆ, ಮಹೇಶ್ ತಗಡೂರು, ದಲ್ಲಾಳ್ ಮಹದೇವ್, ಶಿವಪ್ರಸಾದ್ ಕಂದೇಗಾಲ, ಎಚ್.ಎಸ್.ರವಿಕುಮಾರ್ ಹೂವಿನಕೊಳ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net