ಅಂಕೋಲಾ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

12ANKOLA2 cong
Published on

ಅಂಕೋಲಾ: ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಸ್ಥಾನದ ಅನರ್ಹತೆ ಖಂಡಿಸಿ ಅಂಕೋಲಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಇಲ್ಲಿಯ ಸ್ವಾತಂತ್ರ್ಯ ಸ್ಮಾರಕ ಭವನದ ಗಾಂಧಿ ಪ್ರತಿಮೆಯ ಎದುರು ಮೌನ ಪ್ರತಿಭಟನೆ ನಡೆಯಿತು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಚುನಾವಣೆಗೆ ಸ್ಪರ್ಧಿಸದಂತೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದನ್ನು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ರಾಹುಲ್ ಗಾಂಧಿ ಅವರಿಗೆ ಈ ಮೂಲಕ ಬೆಂಬಲ ಸೂಚಿಸುತ್ತೇವೆ ಎಂದರು.


ಕೆಪಿಸಿಸಿ ಕಾರ್ಯದರ್ಶಿ ರಮಾನಂದ ನಾಯಕ, ಮಾಜಿ ಶಾಸಕ ಕೆ.ಎಚ್. ಗೌಡ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುಜಾತಾ ಗಾಂವಕರ, ಜಿಪಂ ಮಾಜಿ ಸದಸ್ಯ ವಿನೋದ ನಾಯಕ ಬಾಸಗೋಡ, ಪುರಸಭೆ ಸದಸ್ಯ ಕಾರ್ತಿಕ ಎಸ್. ನಾಯ್ಕ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಂಜುನಾಥ ಡಿ. ನಾಯ್ಕ ಪ್ರಮುಖರಾದ ರಾಜು ಹರಿಕಂತ್ರ ಕಣಗಿಲ್, ಪರುಷೋತ್ತಮ ನಾಯ್ಕ, ಸಂಜೀವ ಬಲೇಗಾರ, ಉದಯ ನಾಯಕ, ಸೀಮಾ ಬಂಟ, ಶೋಭಾ ನಾಯ್ಕ ಭಾವಿಕೇರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net