ಆಶಾ ಕಾರ್ಯಕರ್ತೆಯರ ಪ್ರತಿಭಟನೆ

BLY-20-5
ಬಳ್ಳಾರಿಯಲ್ಲಿ ಪ್ರೋತ್ಸಾಹ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು. ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಎ.ದೇವದಾಸ್, ಸಂಘದ ಗೌರವ ಅಧ್ಯಕ್ಷೆ ಎ.ಶಾಂತಾ, ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಇತರರಿದ್ದರು.
Published on

ಬಳ್ಳಾರಿ : ಪ್ರೋತ್ಸಾಹ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ವೇಳೆ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಮಾತನಾಡಿ, ಆರ್‌ಸಿಎಚ್ ಪೋರ್ಟಲ್‌ನ ಗೊಂದಲಗಳಿಗೆ ಕೊನೆಗಾಣಿಸಬೇಕು, ಪ್ರೋತ್ಸಾಹ ಧನ 15 ಸಾವಿರ ರೂ. ನಿಗದಿ ಪಡಿಸಬೇಕು. ನಿಗದಿಯಾಗದ ಅನ್ಯ ಕೆಲಸಗಳನ್ನು ಆಶಾಗಳಿಗೆ ನೀಡಬಾರದು. ಅನಗತ್ಯ ಸರ್ವೆ ಹಾಗೂ ಕಾರ್ಯಕ್ರಮಗಳಲ್ಲಿ ತೊಡಗಿಸಬಾರದು ಎಂದು ಒತ್ತಾಯಿಸಿದರು.

ಜನಗಳ ಆರೋಗ್ಯಕ್ಕಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರನ್ನು ಸರ್ಕಾರಗಳು ಅತ್ಯಂತ ನಿರ್ಲಕ್ಷ್ಯದಿಂದ ಕಾಣುತ್ತಿವೆ. ಕೋವಿಡ್ ವೇಳೆಯಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು ದುಡಿದ ಆಶಾಗಳಿಗೆ ಸರ್ಕಾರಗಳು ನೀಡಿದ್ದಾದರೂ ಏನು ? ಹಿಂದಿನ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಒಂದು ಸಾವಿ ರೂ. ಹೆಚ್ಚಿಸಿತ್ತಾದರೂ, ಅದನ್ನು ಕಾರ್ಯಗತಗೊಳಿಸಲಿಲ್ಲ. ಆಶಾಗಳಿಗೆ ಮೋಸ ಮಾಡಿತು. ಈಗಿನ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನಿಗದಿತ ವೇತನ 5 ಸಾವಿರ ರೂ. ದಿಂದ 8 ಸಾವಿರ ರೂ. ಗೆ ಏರಿಸುವ ಗ್ಯಾರಂಟಿ ನೀಡಿತ್ತು. ಆದರೆ ಇಲ್ಲಿಯವರೆಗೆ ಕಾರ್ಯಗತವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಎ.ದೇವದಾಸ್, ಸಂಘದ ಗೌರವ ಅಧ್ಯಕ್ಷೆ ಎ.ಶಾಂತಾ, ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್, ಮುಖಂಡರಾದ ಗೀತಾ, ರೇಷ್ಮಾ, ರಾಮಕ್ಕ, ಜಲಜಾಕ್ಷಿ ಇನ್ನಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net