ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

15ss1gramasdtaru
ಪ್ರತಿಭಟನೆಗೆ ಬಂದಿದ್ದ ಗ್ರಾಮಸ್ಥರು
Published on

ಶನಿವಾರಸಂತೆ: ದುಂಡಳ್ಳಿ, ಬಿಳಹ, ಚಂಗಡಹಳ್ಳಿ ಮಾರ್ಗವಾಗಿ ಯಸಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ವಿಸ್ತರಣೆಗೆ ಸಂಬಂಧ ಅರಣ್ಯ ಇಲಾಖೆ ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ದುಂಡಳ್ಳಿ, ಬಿಳಹ ಗ್ರಾಮಸ್ಥರು ಶನಿವಾರ ಶನಿವಾರಸಂತೆ ವಲಯ ಅರಣ್ಯ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಒಂದು ವಾರದಲ್ಲಿ ಮರಗಳನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ, 15 ದಿನಗಳಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಮರಗಳನ್ನು ತೆರವುಗೊಳಿಸಿಲ್ಲ. ಹೀಗಾಗಿ, ಗ್ರಾಮಸ್ಥರು ಪ್ರತಿಭಟನೆ ಮಾಡಲು ಅರಣ್ಯ ಇಲಾಖೆ ಕಚೇರಿ ಬಳಿ ಬಂದಿದ್ದರು. ಆದರೆ, ರಸ್ತೆ ಬದಿಯ ಮರಗಳನ್ನು ತೆರವುಗೊಳಿಸಲು ಉಪ ಅರಣ್ಯ ಸಂರಕ್ಷಾಣಾಧಿಕಾರಿಗಳಿಂದ ಶನಿವಾರಸಂತೆ ವಲಯ ಅರಣ್ಯಾಧಿಕಾರಿಗಳ ಕಚೇರಿಗೆ ಆದೇಶ ಬಂದಿರುವ ಮಾಹಿತಿಯನ್ನು ಅಧಿಕಾರಿಗಳು ಪ್ರತಿಭಟನಾಕಾರರಿಗೆ ತಿಳಿಸಿದ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net