ಎಂಎಲ್‌ಸಿ ಸಿ.ಟಿ. ರವಿ ಬಂಧನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

20 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾಽಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಮಾಜಿ ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, ಸಿ.ಟಿ. ರವಿಯವರು ಅವಾಚ್ಯ ಶಬ್ದದಿಂದ ನಿಂದಿಸಿದ್ದರಿ0ದ ಬಂಧಿಸಿದ್ದೇವೆ ಎನ್ನುವ ಕಾಂಗ್ರೆಸ್ಸಿಗರು, ಅತ್ಯಾಚಾರ ಪ್ರಕರಣ ದಾಖಲಾಗಿರುವ ಶಾಸಕರನ್ನು ಏಕೆ ಬಂಽಸಿಲ್ಲ? ಮಹಿಳಾ ದೌರ್ಜನ್ಯದ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಎಂಎಲ್‌ಸಿ ರವಿ ಅವರಿಗೆ ಕೊಲೆಗಡುಕ ಎನ್ನುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೋವಿಡ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಇದೇ ಬೆಳಗಾವಿ ಜೈಲಿನಿಂದ ಬಿಡುಗಡೆಯಾದ ಕಾಂಗ್ರೆಸ್ ಶಾಸಕನಿಗೆ ಆರತಿ ಎತ್ತಿದ್ದರು. ಆಗ ಕೊಲೆಯಾದ ವ್ಯಕ್ತಿಯ ತಾಯಿಯ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದರು.

ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯನನ್ನು ಬಂಽಸಿರುವ ನಡೆ ಖಂಡನೀಯ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ, ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ, ಮಾಜಿ ಶಾಸಕಿ ಸೀಮಾ ಮಸೂತಿ, ಮುಖಂಡರಾದ ವಿಜಯಾನಂದ ಶೆಟ್ಟಿ, ಸುನೀಲ ಮೋರೆ, ಶ್ರೀನಿವಾಸ ಕೋಟ್ಯಾನ್, ರಾಜೇಶ್ವರಿ ಅಳಗವಾಡಿ, ಸಂಜಯ ಕಪಟಕರ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net