ಕಾಂಗ್ರೆಸ್ ಧೋರಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

BJP PROTEST
ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲಕೂಚಬಾಳ, ವಿಜುಗೌಡ ಪಾಟೀಲ, ಚಂದ್ರಶೇಖರ ಕವಟಗಿ ಮತ್ತಿತರರಿದ್ದಾರೆ.
Published on

ವಿಜಯಪುರ: ವಿಧಾನ ಮಂಡಲ ಅಧಿವೇಶನದ ವೇಳೆ ಮಾರ್ಷಲ್‌ಗಳ ದೌರ್ಜನ್ಯ ಖಂಡಿಸಿ ಬಿಜೆಪಿ ಕಾರ್ಯಖರ್ತರು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ ಹಲಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸಂವಿಧಾನ ವಿರೋಧ ಕೃತ್ಯ ಎಸಗುತ್ತಿದೆ. 10 ಶಾಸಕರನ್ನು ಅಮಾನತ್ತುಗೊಳಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಎಳೆದಾಡಿ ಅಪಮಾನ ಮಾಡಿದ್ದಲ್ಲದೇ ಕುಸಿದು ಬೀಳುವಂತೆ ಮಾಡಿದ್ದು ಖಂಡನೀಯ ಎಂದರು.

ದೇಶ ವಿರೋಧಿ ಚಟುವಟಿಕೆ ನಡೆಸುವವರು ಕಾಂಗ್ರೆಸ್ ಆಡಳಿತದಲ್ಲಿ ಚುರುಕಾಗುತ್ತಾರೆ. ಅದಕ್ಕೆ ಕಾರಣ ರಕ್ಷಣೆಯಾಗಿ ನಿಲ್ಲುವುದು ಕಾಂಗ್ರೆಸ್. ಅಧಿಕಾರದಲ್ಲಿದ್ದ ಮಾತ್ರಕ್ಕೆ ಏನು ಮಾಡಿದರೂ ನಡೆಯುತ್ತದೆ ಎಂಬ ಅಹಂಕಾರ ಸಲ್ಲದು ಎಂದರು.

ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿರುವ ತಪ್ಪನ್ನು ಪ್ರಶ್ನಿಸಿದಕ್ಕೆ ಕಾಂಗ್ರೆಸ್ ಈ ರೀತಿ ನಡೆದುಕೊಂಡಿದೆ. ಹಿರಿಯ ಶಾಸಕರೆಂಬ ಗೌರವ ಸಹ ಇಲ್ಲದೆ ಅಮಾನವೀಯವಾಗಿ ನಡೆದುಕೊಂಡಿದೆ. ಇದೇ ವರ್ತನೆ ಮುಂದುವರಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮುಖಂಡ ವಿಜುಗೌಡ ಪಾಟೀಲ ಮಾತನಾಡಿ, ಗ್ಯಾರಂಟಿ ನಂಬಿ ಅಧಿಕಾರ ಕೊಟ್ಟ ಜನರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡುತ್ತಿದೆ ಎಂದು ದೂರಿದರು.

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮುಖಂಡರಾದ ಚಂದ್ರಶೇಖರ ಕವಟಗಿ ಮಾತನಾಡಿದರು.
ನಗರ ಘಟಕದ ಅಧ್ಯಕ್ಷ ಮಳುಗೌಡ ಪಾಟೀಲ, ಬೆಳಗಾವಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಬಿಜೆಪಿ ಮುಖಂಡರಾದ ವಿವೇಕಾನಂದ ಡಬ್ಬಿ, ಭೀಮಾಶಂಕರ ಹದನೂರ, ಸುರೇಶ ಬಿರಾದಾರ, ಉಮೇಶ ಕೋಳಕೂರ, ಚಿದಾನಂದ ಚಲವಾದಿ, ಕಾಸುಗೌಡ ಬಿರಾದಾರ, ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ ಮಗಿಮಠ, ಎಂ.ಎಸ್. ಕರಡಿ, ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ರಾಹುಲ್ ಜಾಧವ, ಕಿರಣ ಪಾಟೀಲ, ವಿಠ್ಠಲ ಹೊಸಪೇಟ, ಮಲ್ಲಿಕಾರ್ಜುನ ಗಡಗಿ, ರಾಜು ಗೋಸಾವಿ, ಮಹೇಶ ಒಡೆಯರ, ವಿಜಯ ಜೋಶಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net