ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

WhatsApp Image 2023-07-22 at 3.05.35 PM
Published on

ಬಳ್ಳಾರಿ : ಕಾಂಗ್ರೆಸ್ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ವರ್ಗಾವಣೆ ದಂಧೆ ಹೆಚ್ಚಾಗುತ್ತಿದೆ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ಕಾಂಗ್ರೆಸ್ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ರಾಜ್ಯದಲ್ಲಿ ಬೆಲೆ ಏರಿಕೆ ಹೆಚ್ಚಾಗಿದ್ದು, ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ದಿನಸಿ ಪದಾರ್ಥಗಳ ಬೆಳೆ ಗಗನಕ್ಕೇರಿದೆ. ಬೆಲೆ ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲಗೊಂಡಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಠಿಗೊಂಡಿದೆ. ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರ ಕೇಸನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುರುಲಿಂಗನಗೌಡ, ಗುತ್ತಿಗನೂರು ವಿರೂಪಾಕ್ಷಪ್ಪಗೌಡ, ಎಚ್.ಹನುಮಂತಪ್ಪ , ಅನಿಲ್ ಕುಮಾರ್ ಹಾಗೂ ಇನ್ನಿತರ ಕಾರ್ಯಕರ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net