ರಸ್ತೆ ಸಂಚಾರ ತಡೆದು ಪ್ರತಿಭಟನೆ

Protest by blocking road traffic
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೇಕಾರರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಆಗಮಿಸಿದ್ದ ತಹಸೀಲ್ದಾರ್ ಗಿರೀಶ ಸ್ವಾದಿ ಅವರಿಗೆ ಮನವಿ ಸಲ್ಲಿಸಲಾಯಿತು. ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ, ಕಲ್ಲಪ್ಪ ಮೈತ್ರಿ, ರವೀಂದ್ರ ಕಡ್ಲಿ, ಹುನ್ನೂರಿನ ಶಂಕರ ಮರೇಗುದ್ದಿ, ಮೋಹನ ದಢೂತಿ, ಸಿದ್ದು ಕಡ್ಲಿಮಟ್ಟಿ ಇದ್ದರು.
Published on

ರಬಕವಿ/ಬನಹಟ್ಟಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೈಮಗ್ಗ ನೇಕಾರರು ಬನಹಟ್ಟಿಯಲ್ಲಿ ನಡೆಸುತ್ತಿರುವ ಸತ್ಯಾಗ್ರಹ ಶನಿವಾರ 17 ನೇ ದಿನಕ್ಕೆ ಕಾಲಿರಿಸಿದೆ. ಇಷ್ಟು ದಿನ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಪಂದಿಸುತ್ತಿಲ್ಲ. ಹೀಗಾಗಿ ಹೋರಾಟ ಚುರುಕುಗೊಳಿಸುವ ನಿಟ್ಟಿನಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು ಎಂದು ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಹೇಳಿದರು.

ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ 12 ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಟರಕಿ ತಿಳಿಸಿದರು.

ರಸ್ತೆ ತಡೆಯಿಂದಾಗಿ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್ ಗಿರೀಶ ಸ್ವಾದಿ ಆಗಮಿಸಿ ಮನವಿ ಸ್ವೀಕರಿಸಿದರು. ನೇಕಾರ ಸಮಾಜದ ಮುಖಂಡರಾದ ಕಲ್ಲಪ್ಪ ಮೈತ್ರಿ, ರವೀಂದ್ರ ಕಡ್ಲಿ, ಹುನ್ನೂರಿನ ಶಂಕರ ಮರೇಗುದ್ದಿ, ಮೋಹನ ದಢೂತಿ, ಸಿದ್ದು ಕಡ್ಲಿಮಟ್ಟಿ, ಪಾರ್ವತಿ ಜವಳಗಿ, ನಿರ್ಮಲಾ ಮಾಳವದೆ, ಶಿಲ್ಪಾ ಬಾಣಕಾರ, ಶ್ರೀಶೈಲ ಮುಗಳೊಳ್ಳಿ, ಮಲೀಕ್ ಜಮಾದಾರ ಅನೇಕರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net