ದೊಡ್ಡಪುರ ಗ್ರಾಮದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ

ದೊಡ್ಡಪುರ ಗ್ರಾಮದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ
Published on

ಹಾಸನ: ತಾಲೂಕಿನ ದೊಡ್ಡಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಅರಸೀಕೆರೆ-ಹಾಸನ ಸಂಪರ್ಕಿಸುವ ಮುಖ್ಯ ರಸ್ತೆ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮಸ್ಥರು, 1983ರಲ್ಲಿ ಸ್ಥಾಪಿತವಾದ ಈ ಶಾಲೆ 1993ರಲ್ಲಿ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಸರ್ವೇ ನಂ.42 ಅಡಿ 6 ಎಕರೆ ಜಮೀನು ಹೊಂದಿದೆ. ಈ ಜಮೀನಿನ ಪೂರ್ವ ಭಾಗದಲ್ಲಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಹಕ್ಕು ಪತ್ರ ಪಡೆದು, ಅನಧಿಕೃತವಾಗಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಪ್ರಾರಂಭಿಸಿದ್ದಾರೆ ಎಂದು ದೂರಿದರು.

ಈ ಬಗ್ಗೆ ತಾಲೂಕು ಆಡಳಿತ ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಪ್ರತಿಭಟನೆಯಿಂದ ಹಾಸನ-ಅರಸೀಕೆರೆ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾನಿರತರ ಮನವೊಲಿಸಿದರು.

ಗ್ರಾಮಸ್ಥರಾದ ಗೋವಿಂದೇಗೌಡ, ರವಿಕುಮಾರ್, ಅಶೋಕ್, ಮಂಜೇಗೌಡ, ಪ್ರಭು, ರಾಮಮೂರ್ತಿ, ನಾಗೇಶ್, ದೇವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net