ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

8 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸರ್ಕಾರ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಮಹಾನಗರ ಬಿಜೆಪಿ ಕಾರ್ಯಕರ್ತರು ನಗರದ ಜ್ಯುಬಿಲಿ ವೃತ್ತದಲ್ಲಿ ಶನಿವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಆದ್ಯತೆ ನೀಡಿದ್ದು, ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳು, ರೈತರಿಗೆ ವಿಶೇಷ ಘೋಷಣೆ ಮಾಡಿಲ್ಲ. ಅಲ್ಲದೆ, ಉತ್ತರ ರ್ನಾಟಕ, ಹಾಗೂ ಹುಬ್ಬಳ್ಳಿ- ಧಾರವಾಡ ಅವಳಿನಗರದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು. ಕೆಲ ಕಾಲ ರಸ್ತೆ ತಡೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಮನವಿ ರವಾನಿಸಿದರು.

ವಿಜಯಾನಂದ ಶೆಟ್ಟಿ, ದತ್ತಮೂರ್ತಿ ಕುಲಕರ್ಣಿ,ಶಿವು ಮೆಣಸಿನಕಾಯಿ, ಬಸವರಾಜ ಗರಗ, ಶಂಕರ ಶೇಳಕೆ, ಮೋಹನ ರಾಮದರ್ಗ, ಮಹಾಂತೇಶ ವಿರಕ್ತಮಠ, ಮಂಜುನಾಥ ನೀರಲಕಟ್ಟಿ, ಮಂಜುನಾಥ ಕಾಟ್ಕರ್, ರಾಜು ಕಾಳೆ, ರಾಜು ಕೋಟೆನ್ನವರ, ಅನಿತಾ ಚಳಗೇರಿ, ಪ್ರಮೋದ ಕಾರಕೂನ, ಪವನ್ ಥಿಟೆ, ಮಂಜು ಹೆಬಸೂರ, ವೀರೇಶ ಹಿರೇಮಠ, ಬಸವರಾಜ ಬಾಳಗಿ, ಪ್ರಣೀತ ರಾಮನಗೌಡರ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net