ಕಾವೇರಿ ಕ್ರಿಯಾ ಸಮಿತಿಯಿಂದ ಪ್ರತಿಭಟನೆ

25
Published on

ಮೈಸೂರು: ಬೇಸಿಗೆಯಲ್ಲಿಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಕಾವೇರಿ ಕ್ರಿಯಾ ಸಮಿತಿಯಿಂದ ಶನಿವಾರ ನಗರದ ಕೆ.ಆರ್.ಎಸ್ ರಸ್ತೆಯಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಮುಖ್ಯದ್ವಾರವನ್ನು ಮುಚ್ಚಿದ ಕಾರ್ಯಕರ್ತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ನಮ್ಮ ರಾಜ್ಯದಲ್ಲಿಯೇ ಈಗಾಗಲೇ ಬರ ಇರುವಾಗ ನಮ್ಮಲ್ಲಿ ಕುಡಿಯಲೇ ನೀರಿಲ್ಲ. ಇಂಥ ಸಮಯದಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿರುವುದು ಅತ್ಯಂತ ಖಂಡನೀಯ. ಆದ್ದರಿಂದ ತಮಿಳುನಾಡಿಗೆ ಬಿಡುತ್ತಿರುವ ನೀರು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷ ಎಸ್.ಜಯಪ್ರಕಾಶ್, ಪ್ರಧಾನ ಸಂಚಾಲಕ ಮೂಗೂರು ನಂಜುಂಡಸ್ವಾಮಿ, ಮುಖಂಡರಾದ ತೇಜಸ್ ಲೋಕೇಶ್‌ಗೌಡ, ಆಟೋ ಮಹದೇವು, ಹನುಮಂತೇಗೌಡ, ನಾಗರಾಜ್, ಪ್ರಭುಶಂಕರ್, ಹನುಮಂತಯ್ಯ, ನೇಹಾ, ಮಂಜುಳಾ, ಭಾಗ್ಯಮ್ಮ, ಸಿಂಧುವಳ್ಳಿ ಶಿವಕುಮಾರ್, ಪುಷ್ಪವತಿ, ರವೀಶ್, ರಘು, ವಿಷ್ಣು, ಪ್ರಭಾಕರ, ಪ್ರಮೋದ್, ವರಕೋಡು ಕೃಷ್ಣೇಗೌಡ, ಬಸವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net