

ಕುಶಾಲನಗರ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಪಟ್ಟಣದಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆ ನೌಕರರು ಪ್ರತಿಭಟನೆ ನಡೆಸಿದರು.
ಸಿಐಟಿಯು ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ನೂರಾರು ಕಾರ್ಮಿಕರು ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿ ಮಳೆಯ ನಡುವೆಯೇ ಪ್ರತಿಭಟನೆ ನಡೆಸಿ ಕಾರ್ಮಿಕರನ್ನು ಗುಲಾಮಗಿರಿ ತಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದಿಕ್ಕಾರ, ದಿಕ್ಕಾರ, ನಾಲ್ಕು ಕಾರ್ಮಿಕ ಸಹಿಂತೆಗಳನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
ಸಂದರ್ಭ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಪ್ರತಾಪ್, ಕರ್ನಾಟಕ ಪ್ರಾಂತ್ಯ ರೈತ ಸಂಘದ ಮುಖಂಡ ಟಿ.ಟಿ.ಉದಯಕುಮಾರ್, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮುನಾ, ತಾಲೂಕು ಅಧ್ಯಕ್ಷೆ ಸಾವಿತ್ರಿ,ಕಾರ್ಯದರ್ಶಿ ಚಂದ್ರೀಕಾ ಪಾಲ್ಗೊಂಡಿದ್ದರು.