ಹೊಂಡಮಯವಾದ ಮೈಸೂರು ರಸ್ತೆ: ಗುಂಡಿಗೆ ಮಣ್ಣು ತುಂಬಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

congress protest
Published on

ಮೈಸೂರು: ಕೃಷ್ಣರಾಜ ಕ್ಷೇತ್ರದ ಬಹುತೇಕ ರಸ್ತೆಗಳು ಗುಂಡಿಮಯವಾಗಿದ್ದು, ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ನಂಜುಮಳಿಗೆ ಬಳಿ ಗುರುವಾರ ರಸ್ತೆಯ ಹೊಂಡಕ್ಕೆ ಮಣ್ಣು ಸುರಿದು ಪ್ರತಿಭಟನೆ ನಡೆಸಿದರು.

ಸಾಮಾನ್ಯವಾಗಿ ದಸರಾ ಸಂದರ್ಭ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಆದರೆ, ಈ ಬಾರಿ ದಸರಾ ಸಂದರ್ಭದಲ್ಲೂ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ಗುಂಡಿ ತಪ್ಪಿಸಲು ಹೋಗಿ ಸಾಕಷ್ಟು ಅಪಘಾತಗಳು ಸಂಭವಿಸಿದ್ದು, ಮತ್ತಷ್ಟು ಅಪಘಾತಗಳು ಸಂಭವಿಸುವ ಮುನ್ನ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಎಂ.ಕೆ. ಸೋಮಶೇಖರ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀಧರ್, ಭವ್ಯ, ಪ್ರತಿಧ್ವನಿ ಪ್ರಸಾದ್, ಮನೋಜ್, ರಜತ್, ಗುಣಶೇಖರ್, ಪುಟ್ಟಸ್ವಾಮಿ, ಬ್ರಾಡ್‌ವೇ ಕಿರಣ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net