‘ಗೋ ಬ್ಯಾಕ್‌ಮೋದಿ’ ಎಂದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

30
Published on

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡ ಅವರು ‘ಗೋ ಬ್ಯಾಕ್‌ಮೋದಿ’ ಎಂಬ ಘೋಷಣೆಯುಳ್ಳ ಪೋಸ್ಟರ್‌ಗಳನ್ನು ಹಿಡಿದು ಆಕ್ರೋಶ ವ್ಯಕ್ತ ಪಡಿಸಿದರು.

‘ನಮ್ಮ ತೆರಿಗೆ ನಮ್ಮ ಹಕ್ಕು’, ‘ರಾಜ್ಯಕ್ಕೆ ಮಲತಾಯಿ ಧೋರಣೆ’, ‘ಉತ್ತರ ಭಾರತಕ್ಕೆ ಉದಾರತೆ’, ‘ದೇಶದ ಸಂಪತ್ತು ಉದ್ಯಮಿಗಳಿಗೆ ಸಿರಿ ಸಂಪತ್ತು’, ‘ಶ್ರೀಮಂತರ ಸಾಲಮನ್ನಾ- ಬಡವರಿಗೆ ಪಂಗನಾಮ’ ಎಂಬ ಘೋಷಣೆ ಕೂಗಿದರು.

ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಮೇಯರ್‌ಗಳಾದ ಬಿ.ಕೆ.ಪ್ರಕಾಶ್, ಟಿ.ಬಿ. ಚಿಕ್ಕಣ್ಣ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ಮುಖಂಡರಾದ ಎಂ. ಶಿವಣ್ಣ, ಕೆ.ಎಸ್. ಶಿವರಾಮು, ಎಚ್.ಎ. ವೆಂಕಟೇಶ್, ಭಾಸ್ಕರ್, ಅಶೋಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net