ಸಿಪಿಐಎಂನಿಂದ ಪ್ರತಿಭಟನೆ

Oplus_16908288
ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕೋರಿ ಸಿಪಿಐಎಂ ಪಕ್ಷದಿಂದ ಸಿದ್ದಾಪುರ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
Published on

ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ, ಕೂಡುಗದ್ದೆ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿರುವ ಕಾರಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಸಿಪಿಐಎಂ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಖಾಲಿ ಕೊಡಗಳನ್ನು ಹಿಡಿದು ಗುರುವಾರ ಪ್ರತಿಭಟನೆ ನಡೆಸಿದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ರಮೇಶ್ ಮಾತನಾಡಿ, ಈ ವ್ಯಾಪ್ತಿಯಲ್ಲಿ ಬಹುತೇಕ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸಿಸುತ್ತಿದ್ದು, ಕುಡಿಯುವ ನೀರು ಸಮರ್ಪಕವಾಗಿ ನಿಗದಿತ ಸಮಯದಲ್ಲಿ ವಿತರಣೆ ಆಗುತ್ತಿಲ್ಲ. ಕುಡಿಯುವ ನೀರನ್ನು ಶೇಖರಣೆ ಮಾಡಲು ಕಾರ್ಮಿಕರು ಕೆಲಸ ಬಿಟ್ಟು ಮನೆಯಲ್ಲಿ ಕಾದು ಕುಳಿತುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಇದಕ್ಕೆ ಶಾಶ್ವತವಾದ ಪರಿಹಾರವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕೂಡುಗದ್ದೆ ಶಾಖಾ ಕಾರ್ಯದರ್ಶಿ ಅನಿಲ್ ಕುಟ್ಟಪ್ಪ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರು ಸರಿಯಾಗಿ ಸರಬರಾಜು ಆಗುತ್ತಿಲ್ಲ. ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದಿದೆ. ಸಮಸ್ಯೆ ಪರಿಹರಿಸಲು ಒಂದಕ್ಕಿಂತ ಹೆಚ್ಚು ಕೊಳವೆಬಾವಿಯನ್ನು ನಿರ್ಮಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿದರು.

ಕುಡಿಯುವ ನೀರಿನ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಗ್ರಾಪಂ ಗೆ ಸಿಪಿಐಎಂ ಪಕ್ಷ ಮುಖಂಡರು ಇದೇ ಸಂದರ್ಭ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ಸಂಚಾಲನ ಸಮಿತಿಯ ಕಾರ್ಯದರ್ಶಿ ಎನ್.ಡಿ. ಕುಟ್ಟಪ್ಪ, ಪಿ.ಆರ್.ಭರತ್, ಹಂಸ ಮಾಸ್ಟರ್, ಸಿ.ಎಂ ಮುಸ್ತಫಾ, ಖದಿಜ, ಸಾರ, ತಾರಾ, ವಿಮಲಾ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net