ಶಾಸಕ ಯತ್ನಾಳ್ ವಿರುದ್ಧ ಕತ್ತೆ ಚಳವಳಿ: ದಲಿತ ಸಂಘಟನೆಗಳಿಂದ ಪ್ರತಿಭಟನೆ

Protest by Dalit organizations Mandya
Published on

ಮಂಡ್ಯ: ದಲಿತ ಮಹಿಳೆಯರನ್ನು ಅಪಮಾನ ಮಾಡಿದ್ದಾರೆಂದು ಆರೋಪಿಸಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಲಿತ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಯತ್ನಾಳ್ ಪ್ರತಿಕೃತಿಯನ್ನು ಕತ್ತೆ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಯಿತು. ನಂತರ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಆದಾಗ್ಯೂ ಪ್ರತಿಕೃತಿ ದಹನಕ್ಕೆ ಅವಕಾಶ ನೀಡಲಿಲ್ಲ.

ದಲಿತ ಸಮುದಾಯದವರ ಬಗ್ಗೆ ನಾಲಗೆ ಹರಿಯಬಿಟ್ಟು ಅವಮಾನ ಮಾಡಿದ ಯತ್ನಾಳ್ ವಿರುದ್ದ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಆತನನ್ನು ದಲಿತ ಮಹಿಳೆಯರು 2028ಕ್ಕೆ ಸೋಲಿಸಿ ಮನೆಗೆ ಕಳುಹಿಸುತ್ತಾರೆ. ರಾಜ್ಯಾದ್ಯಂತ ದಲಿತರು ಇವರ ಮೇಲೆ ಕೇಸ್ ಹಾಕಲಿದ್ದಾರೆ. ಯತ್ನಾಳ್ ನಾಲಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘಟನೆ ಮುಖಂಡರಾದ ನರಸಿಂಹಮೂರ್ತಿ, ಕೃಷ್ಣ, ಚೀರನಹಳ್ಳಿ ಲಕ್ಷ್ಮಣ್, ನಿರಂಜನ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ, ಆಟೋಕೃಷ್ಣ, ನಂಜುಂಡಮೌರ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net