ಮದ್ದೂರಿನಲ್ಲಿ ದಸಂಸದಿಂದ ಪ್ರತಿಭಟನೆ

10M.D.R.3
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮದ್ದೂರು ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
Published on

ಮದ್ದೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ತಾಲೂಕು ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಘಟನೆಯ ಮೈಸೂರು ವಿಭಾಗೀಯ ಸಂಚಾಲಕ ಮರಳಿಗ ಶಿವರಾಜ್ ಮಾತನಾಡಿ, ತಾಲೂಕಿನ ಆತಗೂರು ಹೋಬಳಿಯ ಮರು ಸರ್ವೇಯನ್ನು ರದ್ದುಪಡಿಸಬೇಕು. ತಾಲೂಕಿನಾದ್ಯಂತ ಇರುವ ನಿರ್ಗತಿಕರಿಗೆ ಸರ್ಕಾರದ ವತಿಯಿಂದ ಸರ್ಕಾರಿ ಜಮೀನುಗಳನ್ನು ಗುರುತಿಸಿ ನಿವೇಶನಗಳನ್ನು ಹಂಚಿಕೆ ಮಾಡಬೇಕು. ತಾಲೂಕಿನ ಚಾಮನಹಳ್ಳಿ ಗ್ರಾಮದ ಸರ್ವೇ ನಂ. 530ರ ಜಯಂತಿ ಗ್ರಾಮದಲ್ಲಿ ವಾಸಿಸುತ್ತಿರುವ ಜನರಿಗೆ ಹಕ್ಕುಪತ್ರಗಳನ್ನು ನೀಡಬೇಕು. ಮರಳಿಗ ಗ್ರಾಮದಲ್ಲಿ ಸುಮಾರು 2ರಿಂದ 3 ತಲೆಮಾರುಗಳಿಂದ ವಾಸಮಾಡುತ್ತಿರುವ ಪರಿಶಿಷ್ಟ ಜನರ ಮನೆಗಳಿಗೆ ಹಕ್ಕುಪತ್ರಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.

ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಶ್ರೀನಿವಾಸ್, ತಾಲೂಕು ಸಂಚಾಲಕ ಪ್ರಕಾಶ್, ಮುಖಂಡರಾದ ಶಂಕರ್, ತಿಮ್ಮೇಶ್, ಪವಿತ್ರಾ, ಶಂಕರಯ್ಯ ಸೇರಿದಂತೆ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net