

ಮೈಸೂರು: ದೆಹಲಿ ಗಡಿಯಲ್ಲಿ ನಿರಶನ ನಡೆಸುತ್ತಿರುವ ರೈತರ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದ ಗನ್‌ಹೌಸ್ ವೃತ್ತದಿಂದ ಕಾಡಾ ಕಚೇರಿವರೆಗೆ ಪಂಜಿನ ಮೆರವಣಿಗೆ ನಡೆಯಿತು.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು, ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, 60 ವರ್ಷ ತುಂಬಿದ ರೈತರಿಗೆ ತಿಂಗಳಿಗೆ ಕನಿಷ್ಠ 10 ಸಾವಿರ ಪಿಂಚಣಿ ನೀಡಬೇಕು, ಪ್ರದಾನ ಮಂತ್ರಿ ಪಸಲ್ ಬೀಮಾ ಬೆಳೆ ವಿಮೆ ನೀತಿ ಬದಲಾವಣೆ ಆಗಬೇಕು, ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಕೈಬಿಡಬೇಕು ಎಂದು ಒತ್ತಾಯಿಸಲಾಯಿತು.
ಪಂಜಿನ ಮೆರವಣಿಗೆಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ನಾಗರಾಜ್, ಕಿರಗಸೂರು ಶಂಕರ್, ಮಾರ್ಬಳ್ಳಿ ನೀಲಕಂಠಪ್ಪ, ಪರಶಿವಮೂರ್ತಿ, ಲಕ್ಷ್ಮೀಪುರ ವೆಂಕಟೇಶ್, ಕುರುಬೂರು ಸಿದ್ದೇಶ್, ವಾಜಮಂಗಲ ಮಾದೇವು, ಕಮಲಮ್ಮ, ವರಕೂಡು ನಾಗೇಶ್, ಹಂಪಾಪರ ರಾಜೇಜ್, ಧನಗಳ್ಳಿ ಕೆಂಡಗಣ್ಣ ಸ್ವಾಮಿ ಹಾಗೂ ಇತರರು ಪಾಲ್ಗೊಂಡಿದ್ದರು.