ರೈತ ಸಂಘದ ಕಾರ್ಯಕರ್ತರಿಂದ ಪ್ರತಿಭಟನೆ

27-GPT-3
ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಳಿ ಕ್ರಷರ್ ಸ್ಥಾಪನೆ ಹಾಗೂ ಸ್ಥಳ ಮಹಜರಿಗೆ ಹೋಗಿದ್ದ ತಹಸೀಲ್ದಾರ್ ಅವರ ನಡೆಯನ್ನು ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on

ಗುಂಡ್ಲುಪೇಟೆ: ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಳಿ ಕ್ರಷರ್ ಸ್ಥಾಪನೆ ಹಾಗೂ ಸ್ಥಳ ಮಹಜರಿಗೆ ಹೋಗಿದ್ದ ತಹಸೀಲ್ದಾರ್ ಸ್ಥಳೀಯರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬುಧವಾರ ಬೆಳಗ್ಗೆ ಸಂಘಟನೆಯ ತಾಲೂಕು ಅಧ್ಯಕ್ಷ ನಾಗಪ್ಪ ನೇತೃತ್ವದಲ್ಲಿ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು ಕ್ರಷರ್ ಆರಂಭಿಸಲು ಅನುಮತಿ ನೀಡಿರುವ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.

ನಂತರ ತಾಲೂಕು ಕಚೇರಿ ಎದುರು ಸಮಾವೇಶಗೊಂಡು ಸ್ಥಳೀಯರ ತೀವ್ರ ವಿರೋಧವಿದ್ದರೂ ಕ್ರಷರ್ ಸ್ಥಳ ಮಹಜರಿಗೆ ಹೋಗಿದ್ದ ತಹಸೀಲ್ದಾರ್ ಟಿ.ರಮೆಶ ಬಾಬು ಗ್ರಾಮಸ್ಥರ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದನ್ನು ಖಂಡಿಸಿದರು. ತಹಸೀಲ್ದಾರ್ ಅವರ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net