ಗಂಧದಗುಡಿ ಫೌಂಡೇಷನ್ ವತಿಯಿಂದ ಪ್ರತಿಭಟನೆ

17
Published on

ಮೈಸೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಗಂಧದಗುಡಿ ಫೌಂಡೇಷನ್ ವತಿಯಿಂದ ಗುರುವಾರ ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ವಿಧಾನಸೌಧದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ದೇಶಪ್ರೇಮಿಗಳು ಎಂದಿಗೂ ದೇಶದ ವಿರುದ್ಧ ನಡೆದುಕೊಳ್ಳುವುದಿಲ್ಲ. ಇಂತಹವರನ್ನು ದೇಶದಲ್ಲಿ ಇರಿಸಿಕೊಳ್ಳುವ ಬದಲು ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net