ಬಿಸಿಯೂಟ ನೌಕರರಿಂದ ಪ್ರತಿಭಟನೆ

manavi
Published on

ಬೈಂದೂರು: ಸರ್ಕಾರಿ ಶಾಲೆಗಳ ಬಿಸಿಯೂಟ ನೌಕರರಿಗೆ ಕನಿಷ್ಠ ಗೌರವಧನ ನೀಡುತ್ತಿದ್ದು, ರಜೆ ನೀಡುವುದಿಲ್ಲ. ಸರ್ಕಾರಿ ರಜಾ ದಿನಗಳಲ್ಲಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದ್ದು, ಇದಕ್ಕೆ ವಿಶೇಷ ಗೌರವಧನ ಕೂಡ ನೀಡುವುದಿಲ್ಲ. ಹೀಗಾಗಿ ಬಿಸಿಯೂಟ ನೌಕರರು ವಿವಿಧ ಬೇಡಿಕೆ ಈಡೇರಿಸಬೇಕು. ಮಾಸಿಕ ಗೌರವಧನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಬೈಂದೂರು ತಾಲೂಕು ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪ್ರತಿಭಟನಾಗಾರರ ಸಮಸ್ಯೆ ಆಲಿಸಿ ಅವರಿಂದ ಮನವಿ ಸ್ವೀಕರಿಸಿದರು. ಬಳಿಕ ಸ್ಥಳದಲೇ ಮೇಲಾಧಿಕಾರಿಗಳಿಗೆ ಕರೆ ಮಾಡಿ, ಬಿಸಿಯೂಟ ನೌಕರರ ಸಮಸ್ಯೆಗೆ ನಿವಾರಿಸುವಂತೆ ಸೂಚನೆ ನೀಡಿದರು. ಉಳಿದ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸುವ ಕುರಿತು ಶಾಸಕರು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net