ಜೈ ಭೀಮ್ ಯುವ ಸಂಘದಿಂದ ಪ್ರತಿಭಟನೆ

new Bhim New
Published on

ಹುಬ್ಬಳ್ಳಿ : ಇಲ್ಲಿನ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಹತ್ಯೆ ನಡೆಸಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಜೈ ಭೀಮ್ ಯುವ ಸಂಘದ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕೊಲೆ ಆರೋಪಿಗಳಿಗೆ ಉತ್ತರ ಪ್ರದೇಶ ಮಾದರಿಯಲ್ಲಿ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿಗೆ ತಹಸೀಲ್ದಾರ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ನಾಗರಾಜ ಅಂಬಿಗೇರ, ರಾಜು ತೇರದಾಳ, ವಿಶ್ವನಾಥ ಬಿ., ಮನೋಜ ಮಾನೆ, ಪರಶುರಾಮ ದಾವಣಗೆರೆ, ವಿಶ್ವನಾಥ ಪೂಜಾರಿ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net