ಮಡಿಕೇರಿಯಲ್ಲಿ ವಕೀಲರಿಂದ ಪ್ರತಿಭಟನೆ

Protest by lawyers in Madikeri
Published on

ಮಡಿಕೇರಿ:

ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಅವರ ಮೇಲೆ ಅಲ್ಲಿನ ಪೊಲೀಸ್ ಸಿಬ್ಬಂದಿ ವಿನಾಕಾರಣ ಅಮಾನುಷವಾಗಿ ಮನಬಂದಂತೆ ಥಳಿಸಿ ಘಾಸಿ ಮಾಡಿರುವ ಘಟನೆ ಖಂಡಿಸಿ ಮಡಿಕೇರಿಯಲ್ಲಿ ವಕೀಲರು ಪ್ರತಿಭಟನೆ ನಡೆಸಿದರು. ಶನಿವಾರ ದಿನದ ನ್ಯಾಯಾಲಯದ ಕಲಾಪಗಳಿಂದ ವಕೀಲರು ಸ್ವಯಂ ಪ್ರೇರಿತವಾಗಿ ಹೊರ ಉಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ. ನಿರಂಜನ್, ಯುವ ವಕೀಲರ ಮೇಲೆ ಚಿಕ್ಕಮಗಳೂರು ಪೊಲೀಸ್ ಸಿಬ್ಬಂದಿ ನಡೆಸಿರುವ ಹಲ್ಲೆ ಖಂಡನೀಯ. ವಕೀಲರು ಸಮಾಜದ ಅಭಿರಕ್ಷಕರು, ಇವರನ್ನೇ ಪೊಲೀಸ್ ಇಲಾಖೆಯವರು ಹೀಗೆ ನಡಿಸಿಕೊಂಡರೆ, ಇನ್ನು ಸಾಮಾನ್ಯ ಜನರನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬ ಪ್ರಶ್ನೆ ವಕೀಲ ಸಮುದಾಯದಲ್ಲಿ ಮೂಡಿದೆ, ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ದ ಎಫ್.ಐ. ಅರ್. ದಾಖಲಾದರೂ ಆರೋಪಿಗಳನ್ನು ಬಂಧನ ಮಾಡದೇ ಇರುವುದು ಸರಿಯಲ್ಲ. ಪ್ರಕರಣದ ಗಂಭೀರತೆಯನ್ನು ಅರಿತ ರಾಜ್ಯ ಸರ್ಕಾರ ಆರೋಪಿಗಳನ್ನು ಸೇವೆಯಿಂದ ಅಮಾನತು ಮಾಡಿದೆ. ಆದರೆ ಅರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂಬುದು ರಾಜ್ಯದ ಎಲ್ಲಾ ವಕೀಲ ಸಂಘಗಳ ಆಗ್ರಹ ಆಗಿದೆ ಎಂದರು. ವಕೀಲರ ಸಂಘದ ಪದಾಧಿಕಾರಿಗಳು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net