ಪಶು ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟನೆ

Protest by locking down veterinary hospital
Published on

ಸವಣೂರ: ಪಟ್ಟಣದ ಪಶು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಖಂಡಿಸಿ ರೈತ ಸಂಘದ ಪದಾಽಕಾರಿಗಳ ನೇತೃತ್ವದಲ್ಲಿ ರೈತರು ಬುಧವಾರ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಸ್ಥಳೀಯ ಪಶು ಆಸ್ಪತ್ರೆಯಲ್ಲಿ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಔಷಧಗಳನ್ನು ಹೊರಗಡೆಯಿಂದ ತೆಗೆದುಕೊಂಡು ಬರುವಂತೆ ಹೇಳುತ್ತಾರೆ. ಆಸ್ಪತ್ರೆಯಲ್ಲಿ ಯಾವುದೇ ಸೌಲಭ್ಯ ನೀಡಲು ವೈದ್ಯರು ಹಾಗೂ ಸಂಬಧಪಟ್ಟ ಸಿಬ್ಬಂದಿ ನಿರ್ಲಕ್ಷ ವಹಿಸುತ್ತಿದ್ದಾರೆ. ಇಲಾಖೆ ಹಿರಿಯ ಅಽಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ರೈತರು ಪಟ್ಟು ಹಿಡಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ರವಿಕುಮಾರ ಕೊರವರ, ರೈತರ ಸಮಸ್ಯೆ ಆಲಿಸಿದರು. ನಂತರ ಪಶು ಆಸ್ಪತ್ರೆ ಸಿಬ್ಬಂದಿಗೆ ಎಚ್ಚರಿಕೆ ನೀಡಿ, ಜಾನುವಾರುಗಳನ್ನು ವೈದ್ಯರೇ ಪರಿಶೀಲಿಸಿ ಚಿಕಿತ್ಸೆ ನೀಡಬೇಕು. ರೈತರು ಸಂಕಷ್ಟ ಹೇಳಿಕೊಳ್ಳುವ ಮೊದಲು ಸರ್ಕಾರದ ಸೌಲಭ್ಯಗಳಡಿ ಸೇವೆ ನೀಡಲು ಸೂಚಿಸಿದರು. ರೈತ ಸಂಘದ ತಾಲೂಕು ಘಟಕ ಪದಾಽಕಾರಿಗಳು, ರೈತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net