ಕನ್ಹಯ್ಯ ಲಾಲ್​ ಹತ್ಯೆ ಖಂಡಿಸಿ ಮುಸ್ಲಿಮರಿಂದ ಪ್ರತಿಭಟನೆ, 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ..

Kanhaiya Lal
Published on

ಬೆಳಗಾವಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್​ ಕನ್ಹಯ್ಯ ಲಾಲ್ ಅವರನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ. ಹಾಗೇ ಬೆಳಗಾವಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆದಿದ್ದು, ಮುಸ್ಲಿಮರೂ ಈ ಕೊಲೆಯನ್ನು ಖಂಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ಅಂಜುಮಾನ್ ಇಸ್ಲಿಮಿಯಾ ಕಮಿಟಿಯವರು ಧರಣಿ ನಡೆಸಿದ್ದು, ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ಖಂಡಿಸಿದ್ದಾರೆ.

ಕೊಲೆ ಮಾಡಿದ ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕು, ಕೊಲೆಗೀಡಾದ ಟೇಲರ್ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಮತ್ತು ಒಂದು ಕೋಟಿ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿರುವ ಈ ಕಮಿಟಿ, ಮುಂದೆ ಈ ರೀತಿ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್​ ಮ‌ೂಲಕ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net