

ಮೈಸೂರು: ಎಸ್‌ಸಿ, ಎಸ್ಟಿ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದಿಂದ ನಗರದ ಕ್ರಾಫರ್ಡ್ ಭವನದ ಎದುರು ಪ್ರತಿಭಟನೆ ನಡೆಯಿತು.
ಶಿಷ್ಯವೇತನ ಹೆಚ್ಚಳ ಮಾಡುವಂತೆ ಹೋರಾಟ ನಡೆಸುತ್ತಲೇ ಇದ್ದೇವೆ. ಆದರೆ, ಸರ್ಕಾರ ಈ ಬಗ್ಗೆ ಕ್ರಮ ವಹಿಸುತ್ತಿಲ್ಲ. ಮನೆ ಬಾಡಿಗೆ ಹೆಚ್ಚಳ, ಸಂಶೋಧನಾ ಲೇಖನಗಳ ವೆಚ್ಚದ ಹೆಚ್ಚಳ ಹಾಗೂ ಇತರ ಶುಲ್ಕಗಳ ಹೆಚ್ಚಳದಿಂದಾಗಿ ಸಂಶೋಧನಾ ಕಾರ್ಯ ನಡೆಸಲು ಸಾಧ್ಯವಾಗುತ್ತಿಲ್ಲ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕಾರಣ ಪ್ರಸ್ತುತ ನೀಡುತ್ತಿರುವ ಶಿಷ್ಯವೇತನದ ಜತೆಗೆ 10 ಸಾವಿರ ರೂ ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ಉಪಾಧ್ಯಕ್ಷ ಎಂ.ಮಲ್ಲೇಶ್, ಎಂ.ಲಿಂಗರಾಜು, ಪ್ರಧಾನ ಕಾರ್ಯದರ್ಶಿ ಕುಶಾಲ್, ಕಾರ್ಯಾಧ್ಯಕ್ಷರಾದ ಲೋಕೇಶ್, ವಿದ್ಯಾರ್ಥಿ ಮುಖಂಡರಾದ ಕುಮಾರ್, ದಿಲೀಪ್, ವಿಶ್ವಪ್ರಸಾದ್ ಹಾಗೂ ಇತರರು ಪಾಲ್ಗೊಂಡಿದ್ದರು.