ಮೈಸೂರು ವಿವಿ ಪಿಜಿ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

protest stock-vector-protest-logo-retro-style-hand-popular-protest-261798572
Published on

ಮೈಸೂರು: ಮೈಸೂರು ವಿವಿ ಪಿ.ಜಿ.ಹಾಸ್ಟೆಲ್‌ನಲ್ಲಿ ಊಟ, ತಿಂಡಿಯನ್ನು ಸರಿಯಾಗಿ ಕೊಡುತ್ತಿಲ್ಲ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಗುರುವಾರ ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.


ಹಾಸ್ಟೆಲ್‌ನಲ್ಲಿ ಸರಿಯಾಗಿ ಊಟ, ತಿಂಡಿ ನೀಡುತ್ತಿಲ್ಲ. ಬೆಳಗಿನ ತಿಂಡಿಗೆ ಕೆಟ್ಟಿರುವ ಅನ್ನದಲ್ಲಿ ಚಿತ್ರಾನ್ನ ಮಾಡಿಕೊಡುತ್ತಾರೆ. ಕೇಳಿದರೆ ಸರಿಯಾಗಿ ಸ್ಪಂದಿಸುವುದಿಲ್ಲ. ಊಟವನ್ನೂ ಇದೇ ರೀತಿ ಕೊಡುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸರಿಯಾಗಿ ಊಟ ಸಿಗುತ್ತಿಲ್ಲ. ಅ.13ರಿಂದ ಮೆಸ್ ನಿಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಅ.24ರವರೆಗೆ ಕೆಲವು ವಿಭಾಗಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮಧ್ಯದಲ್ಲಿ ಮೆಸ್ ನಿಲ್ಲಿಸಿದರೆ ಅವರಿಗೆ ಕಷ್ಟವಾಗುತ್ತದೆ. ಹೀಗಾಗಿ ಪರೀಕ್ಷೆ ಮುಗಿಯುವವರೆಗೆ ಮೆಸ್ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವಿವಿಯ ಕುಲಸಚಿವೆ ಶೈಲಜಾ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿ, ಕಾರಣ ಕೇಳಿ ನಂತರ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ವಿದ್ಯಾರ್ಥಿಗಳ ಮನವೊಲಿಸಿದ ಬಳಿಕ ಪ್ರತಿಭಟನೆ ಕೈಬಿಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net