ಮಾಜಿ ಸಚಿವ ನೇತೃತ್ವದಲ್ಲಿ ಪ್ರತಿಭಟನೆ

2- PROTEST BJP
Published on

ಕೆ.ಆರ್.ಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.


ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ರಾಜ್ಯ ಸರ್ಕಾರ ಲೋಕಸಭಾ ಫಲಿತಾಂಶ ಬರುವುದನ್ನೇ ಕಾಯುತ್ತಿತ್ತು. ಫಲಿತಾಂಶ ಬಂದ ಕೆಲ ದಿನಗಳಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಹಾಕಿದೆ. ಈ ರೀತಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರು ಬದುಕುವುದು ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ದುರಾಡಳಿತ ತುಂಬಾ ದಿನ ನಡೆಯುವುದಿಲ್ಲ. ಜನಸಾಮಾನ್ಯರು ಎಚ್ಚೆತ್ತುಕೊಂಡು ಸರ್ಕಾರಕ್ಕೆ ಬುದ್ದಿ ಕಲಿಸುವ ಕೆಲಸ ಮಾಡಬೇಕು. ಛಾಪಾ ಕಾಗದ ಹಾಗೂ ಪಹಣಿ ಬೆಲೆಯನ್ನು ಏರಿಕೆ ಮಾಡುವ ಮೂಲಕ ರೈತ ವಿರೋಧಿಯೂ ಆಗಿದೆ ಎಂದು ದೂರಿದರು.


ಮುಡಾ ಮಾಜಿ ಅಧ್ಯಕ್ಷ ಶ್ರೀನಿವಾಸ್, ಪುರಸಭೆ ಮಾಜಿ ಸದಸ್ಯ ವಿನೋದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹೊಸಹೊಳಲು ಯೋಗೇಶ್ ಗೌಡ, ಸಿಂಗನಹಳ್ಳಿ ರವಿ, ಜಿಲ್ಲಾ ನೇಕಾರ ಪ್ರಕೋಷ್ಠದ ಅಧ್ಯಕ್ಷ ಮೋಹನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net