ಹಕ್ಕುಪತ್ರಕ್ಕೆ ಒತ್ತಾಯಿಸಿ ಮೇಕೆಬಂಡೆ ನಿವಾಸಿಗಳ ಪ್ರತಿಭಟನೆ

Published on

ಚಿತ್ರದುರ್ಗ: ಹಕ್ಕುಪತ್ರಗಳನ್ನು ವಿತರಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿ ಬುರುಜನಹಟ್ಟಿ ಮೇಕೆಬಂಡೆ ನಿವಾಸಿಗಳು ಒನಕೆ ಓಬವ್ವ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಮೇಕೆಬಂಡೆ ಪ್ರದೇಶದಲ್ಲಿ ಬಡವರು, ಕೂಲಿಕಾರ್ಮಿಕರು, ಹಿಂದುಳಿದ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಕ್ಕು ಪತ್ರಕ್ಕಾಗಿ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ, ಕಂದಾಯ ಇಲಾಖೆ ಹಾಗೂ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಹ ಕ್ಕುಪತ್ರ ವಿತರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ಕೊಳೆಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯ ಕ್ಷ ಗಣೇಶ್, ಉಪಾಧ್ಯಕ್ಷ ಎನ್.ರಂಗಸ್ವಾಮಿ, ಮುಸ್ತಾಫ್, ಬಾಜಿಸಾಬ್, ಕಲೀಲ್‌ವುಲ್ಲಾ, ನೂರ್‌ಬಾಷಾ, ಸಾದತ್, ಅಂಜಾನ್‌ಖಾನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net