ಜಿಲ್ಲಾಧಿಕಾರಿಯ ಮನೆ ಮುಂದೆ ರಾತ್ರೋರಾತ್ರಿ ಪ್ರತಿಭಟನೆ; ಕಾರಣ ಅವ್ಯವಸ್ಥೆ..

Protest
Published on

ವಿಜಯಪುರ: ಜಿಲ್ಲಾಧಿಕಾರಿಯೊಬ್ಬರ ಮನೆ ಮುಂದೆ ರಾತ್ರೋರಾತ್ರಿ ನೂರಾರು ಮಂದಿ ಜಮಾವಣೆಗೊಂಡಿದ್ದು, ಅವ್ಯವಸ್ಥೆಯೊಂದನ್ನು ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ ಪ್ರಕರಣವೊಂದು ಇಂದು ನಡೆದಿದೆ. ವಿಜಯಪುರದ ಜಿಲ್ಲಾಧಿಕಾರಿಯ ನಿವಾಸದ ಮುಂದೆ ಈ ಪ್ರತಿಭಟನೆ ನಡೆದಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಮಂಗಳವಾರ ರಾತ್ರಿ ದಿಢೀರನೆ ಜಿಲ್ಲಾಧಿಕಾರಿ ಮನೆ ನಿವಾಸದೆದುರು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಭೂತನಾಳದ ಎಸ್​ಸಿ-ಎಸ್​ಟಿ ವಸತಿ ನಿಲಯ ಅವ್ಯವಸ್ಥೆಯ ಆಗರವಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ವಸತಿ ನಿಲಯದಿಂದ ಜಿಲ್ಲಾಧಿಕಾರಿ ಮನೆಯವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮನೆ ಎದುರು ಪ್ರತಿಭಟನೆ ನಡೆಸಿದರು. ವಾರ್ಡನ್ ವಿರುದ್ದ ಘೋಷಣೆ ಕೂಗಿದರು. ಅಲ್ಲದೇ ಕೂಡಲೇ ವಸತಿ ನಿಲಯಕ್ಕೆ ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವಂತೆ ಘೋಷಣೆ ಕೂಗಿದರು.

ಆಹಾರ ಗುಣಮಟ್ಟ ಸಂಪೂರ್ಣ ಕಳಪೆಯಾಗಿದೆ, ಇದರಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ ಹದಗೆಡುತ್ತಿದೆ, ವಾರ್ಡನ್ ಕಿರಿಕಿರಿ, ಮೂಲಭೂತ ಸೌಕರ್ಯಗಳ ಕೊರತೆ ವ್ಯಾಪಕವಾಗಿದೆ. ನಮ್ಮ ನೋವಿಗೆ ಸ್ಪಂದಿಸಿ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ನಿವಾಸದ ಮುಂದೆ ಅಳಲು ತೋಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net