ಸುಡುಗಾಡು ಸಿದ್ಧರ ಮಹಾಸಂಘದ ಪ್ರತಿಭಟನೆ

26 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯಲ್ಲಿ ಸೂಕ್ಷ÷್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಸುಡುಗಾಡು ಸಿದ್ಧರ ಮಹಾಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಕಲಾಭವನ ಮೈದಾನದಿಂದ ಜಿಲ್ಲಾಽಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜಿಲ್ಲಾಽಕಾರಿ ಕಚೇರಿ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು, ಸರ್ಕಾರದ ಒಳಮೀಸಲಾತಿ ತೀರ್ಮಾನ 59 ಸೂಕ್ಷ÷್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳ ಸಮೂಹಕ್ಕೆ ಆಘಾತ ಉಂಟು ಮಾಡಿದೆ ಎಂದು ಆರೋಪಿಸಿದರು.

ನ್ಯಾಯಮೂರ್ತಿ ಡಾ. ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇತ್ತೀಚೆಗೆ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಒಳಮೀಸಲಾತಿ ಜಾರಿ ಮಾಡುವ ಒತ್ತಡದಲ್ಲಿರುವ ಸರ್ಕಾರ 101 ಪರಿಶಿಷ್ಟ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವಲ್ಲಿ ಮೀಸಲು ಪ್ರಮಾಣವನ್ನು ಎಚ್ಚರಿಕೆಯಿಂದ ನಿಗದಿಪಡಿಸಬೇಕಿತ್ತು. ಆದರೆ, ಅಲೆಮಾರಿಗಳಂಥ ಧ್ವನಿ ಇಲ್ಲದ ಸಮುದಾಯಗಳ ವಿಷಯದಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿಲ್ಲ. ಕ್ಯಾಬಿನೆಟ್ ನಿರ್ಣಯ ಅಲೆಮಾರಿ ಸಮುದಾಯಗಳಿಗೆ ಮರಣಶಾಸನ ಬರೆದಂತಿದೆ. ಅಲೆಮಾರಿಗಳನ್ನು ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳ ಜತೆ ಸೇರಿಸಿ ಶೇ. 5ರಷ್ಟು ಮೀಸಲಾತಿ ನಿಗದಿ ಮಾಡಿರುವುದು ಅಲೆಮಾರಿ ಸಮುದಾಯಗಳನ್ನು ಶಾಶ್ವತವಾಗಿ ಮೀಸಲಾತಿಯಿಂದ ವಂಚಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಆದ್ದರಿಂದ 59 ಸೂಕ್ಷ÷್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ ರಲ್ಲಿಯೇ ಇರಿಸಿ ಶೇ. 1ರಷ್ಟು ಒಳಮೀಸಲಾತಿ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ಕುರಿತು ರಾಜ್ಯಪಾಲ ಮತ್ತು ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net