ಕಡಬದಲ್ಲಿ ತಾಲೂಕು ಕಚೇರಿ ಮುಂಭಾಗ ಧರಣಿ

7-va
Published on

ಕಡಬ: ಇಲ್ಲಿನ ತಾಲೂಕು ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಗುರುವಾರ ಬೆಳಗ್ಗೆಯಿಂದ ಆರಂಭಗೊಂಡಿತು.

ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಹಲವಾರು ಸಮಸ್ಯೆಗಳಿದ್ದು, ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ ಹಾಗೂ ಲ್ಯಾಪ್‌ಟಾಪ್ ಜತೆಗೆ ಅದಕ್ಕೆ ಅವಶ್ಯಕ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹಾಕಲಾಗುತ್ತಿದೆ ಎಂದು ಗ್ರಾಮ ಆಡಳಿತಾಧಿಕಾರಿಗಳು ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಡಬ ತಾಲೂಕು ತಹಸೀಲ್ದಾರ ಪ್ರಭಾಕರ ಖಜೂರೆ ಅವರಿಗೆ ಬೇಡಿಕೆಗಳ ಮನವಿಯನ್ನು ಮುಷ್ಕರ ನಿರತರು ನೀಡಿದರು. ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಶೇಷಾದ್ರಿ, ಉಪಾಧ್ಯಕ್ಷೆ ಶ್ರುತಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net