

ವಿಜಯವಾಣಿ ಸುದ್ದಿಜಾಲ ಮೂಲ್ಕಿ
ಸರ್ಕಾರ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಶನ್‌ಗಳಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳಿಂದ ಹೈರಾಣಾಗಿ ಶೀಘ್ರ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ, ಸೇವೆಗಳನ್ನು ಸ್ಥಗಿತಗೊಳಿಸಿ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಮೂಲ್ಕಿ ತಾಲೂಕು ತಹಸೀಲ್ದಾರ್ ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.
ತಕ್ಷಣ ಮೂಲಸೌಕರ್ಯಗಳು ಹಾಗೂ ಇತರ ಸೇವಾ ಸೌಲಭ್ಯಗಳನ್ನು ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮೂಲ್ಕಿ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.