ಯುವಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

25 sep tnp 03
Published on

ತಿ.ನರಸೀಪುರ: ಯುವಕರ ಮೇಲೆ ಹಲ್ಲೆ ನಡೆಸಿ ಸುಳ್ಳು ಸುಮೊಟೊ ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗುರುವಾರ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.

ತಾಲೂಕಿನ ತುಂಬಲ ಗ್ರಾಮದಲ್ಲಿ ಸೆ.5 ರಂದು ಗುಂಪು ಗಲಭೆ ನಡೆಯದಿದ್ದರೂ 10 ಯುವಕರನ್ನು ಪಟ್ಟಣದ ಪೊಲೀಸ್ ಠಾಣೆಗೆ ಕರೆಸಿ ಮಾರಣಾಂತಿಕ ಹಲ್ಲೆ ನಡೆಸಿ ನಂತರ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಎಸ್‌ಪಿ ಅವರಿಗೂ ದೂರು ನೀಡಿ 20 ದಿನಗಳಾದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು. ನಂತರ ತಹಸೀಲ್ದಾರ್ ಟಿ.ಜಿ.ಸುರೇಶಾಚಾರ್ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಸಂಘಟನಾ ಸಂಚಾಲಕರಾದ ಶಂಭುಲಿಂಗಸ್ವಾಮಿ, ಚೋರನಹಳ್ಳಿ ಶಿವಣ್ಣ, ಕುಕ್ಕೂರು ರಾಜು, ಮಲ್ಲಹಳ್ಳಿ ನಾರಾಯಣ, ಬಣ್ಣಹಳ್ಳಿ ಸೋಮಣ್ಣ, ಯರಿಯೂರು ರಾಜಣ್ಣ, ಅತ್ತಿಕುಪ್ಪೆ ರಾಮಕೃಷ್ಣ, ಕಲ್ಲಹಳ್ಳಿ ಕುಮಾರ್, ಜಾನಿ ದೊರೆಸ್ವಾಮಿ, ಕುಬೇರಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net