ಫೈಜಿ ಬಂಧನ ಖಂಡಿಸಿ ಪ್ರತಿಭಟನೆ

Btw_SDPI
Published on

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಬಂಧನ ಖಂಡಿಸಿ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ದಿಕ್ಸೂಚಿ ಭಾಷಣ ಮಾಡಿದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ , ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಎಸ್‌ಡಿಪಿಐ ರಾಷ್ಟ್ರಾದ್ಯಂತ ಹೋರಾಟ ಸಂಘಟಿಸುತ್ತಿದ್ದು, ಇದನ್ನು ಸಹಿಸದ ಕೇಂದ್ರ ಸಂಘ ಪರಿವಾರ ಪ್ರೇರಿತ ಬಿಜೆಪಿ ಸರ್ಕಾರ ನಮ್ಮ ಅಧ್ಯಕ್ಷರನ್ನು ಅಕ್ರಮ ಬಂಧನ ಮಾಡಿದೆ ಎಂದರು.

ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿದರು. ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಂ, ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮೂನಿಷ್ ಆಲಿ, ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸಮಿತಿ ಸದಸ್ಯರಾದ ಅಡ್ವೊಕೇಟ್ ಕಬೀರ್, ವಿಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ವಿಮ್ ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಎಸ್.ಎಚ್., ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಜತೆ ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಕೋಶಾಧಿಕಾರಿ ಯಾಸಿರ್ ಕಲ್ಲಡ್ಕ, ಕ್ಷೇತ್ರ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರ್, ಕಲ್ಲಡ್ಕ ಬ್ಲಾಕ್ ಸಮಿತಿ ಅಧ್ಯಕ್ಷ ಸತ್ತಾರ್ ಕಲ್ಲಡ್ಕ, ಪುದು ಬ್ಲಾಕ್ ಅಧ್ಯಕ್ಷ ಇರ್ಫಾನ್ ತುಂಬೆ ಉಪಸ್ಥಿತರಿದ್ದರು. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಡಕಬೈಲ್, ಕಾವಳಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net