ಎಂಇಎಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

22krp-01
Published on

ಕೆ.ಆರ್.ಪೇಟೆ: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಎಂಇಎಸ್ ಪುಂಡರು ನಡೆಸಿದ ದೌರ್ಜನವನ್ನು ಖಂಡಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಖಂಡನಾ ನಿರ್ಣಯ ಕೈಗೊಳ್ಳುವ ಜತೆಗೆ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಪ್ರವಾಸಿ ಮಂದಿರದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರವೇ ಸ್ವಾಭಿಮಾನಿ ಸೇನೆಯ ಮಂಡ್ಯ ಜಿಲ್ಲಾಧ್ಯಕ್ಷ ಅಗ್ರಹಾರಬಾಚಹಳ್ಳಿ ಕಾಂತರಾಜು ಮಾತನಾಡಿ, ನಮ್ಮ ನಾಡಿನಲ್ಲಿಯೇ ಬದುಕು ರೂಪಿಸಿಕೊಂಡು ನಮ್ಮ ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಮಾಡಿರುವುದು ಖಂಡನೀಯ. ಇಂತಹ ಸಮಾಜ ದ್ರೋಹಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸಭೆಯಲ್ಲಿ ಕರವೇ ಸ್ವಾಭಿಮಾನಿ ಸೇನೆಯ ಕೆ.ಆರ್.ಪೇಟೆ ತಾಲೂಕು ಘಟಕದ ಅಧ್ಯಕ್ಷ ಸಮೀರ್, ಕಾನೂನು ವಿಭಾಗದ ಜಿಲ್ಲಾಧ್ಯಕ್ಷ ವಕೀಲರಾದ ದೇವಾನಂದ್, ಪ್ರಭಾಕರ್, ಗಿರೀಶ್, ಮಂಜುನಾಥ್, ಮುಖಂಡರಾದ ಕಿರಣ್.ವಿ ದಯಾನಂದ್, ನವೀನ್, ಅಜ್ಜು, ಜಮ್ಮಿಲ್, ಅಂಜಾದ್ ಮುರುಗೇಶ್ ಸೇರಿದಂತೆ ಹಲವು ಪ್ರತಿಭಟನಾಕಾರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net