ಶೂ ಎಸೆದ ಪ್ರಕರಣ ಖಂಡಿಸಿ ಪ್ರತಿಭಟನೆ

10SPT01.
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲೆತ್ನಿಸಿದ್ದನ್ನು ಖಂಡಿಸಿ ಸೋಮವಾರಪೇಟೆ ಪುಟ್ಟಪ್ಪ ವೃತ್ತದಲ್ಲಿ ಕೊಡಗು ಜಿಲ್ಲಾ ದಲಿತ ಹಿತರಕ್ಷಣ ಒಕ್ಕೂಟ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು.
Published on

ಸೋಮವಾರಪೇಟೆ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆಯಲೆತ್ನಿಸಿದ ಘಟನೆ ಖಂಡಿಸಿ, ಆರೋಪಿ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ದೆಹಲಿಯಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟ ಶುಕ್ರವಾರ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು.

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಮಯದಲ್ಲಿ ವಕೀಲ ರಾಕೇಶ್ ಕಿಶೋರ್ ನ್ಯಾಯಪೀಠದ ಮೇಲೆ ಶೂ ಎಸೆಯಲು ಮುಂದಾಗಿದ್ದ ಇದು ಸಂವಿಧಾನ ವಿರೋಧಿಯಾಗಿದೆ ಎಂದು ಒಕ್ಕೂಟದ ಗೌರವಾಧ್ಯಕ್ಷ ಜಯಪ್ಪ ಹಾನಗಲ್ ಹೇಳಿದರು.

ಒಕ್ಕೂಟದ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಅರೋಪಿ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮವಾಗಬೇಕು. ಇದರೊಂದಿಗೆ ಮತ್ತೊಬ್ಬ ವಕೀಲರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿರುವುದು ವರದಿಯಾಗಿದ್ದು, ಇವರ ಮೇಲೂ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವ ತನಕ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಸಿದರು.

ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಒಕ್ಕೂಟದ ಉಪಾಧ್ಯಕ್ಷ ಕೆ.ಬಿ. ರಾಜು, ಕಾರ್ಯದರ್ಶಿ ಬಿ.ಇ.ಜಯೇಂದ್ರ, ಸಹ ಕಾರ್ಯದರ್ಶಿ ಮಹೇಶ್, ಖಜಾಂಚಿ ಎಚ್.ಎ. ನಾಗರಾಜು, ಪದಾಧಿಕಾರಿಗಳಾದ ಜೆ.ಆರ್. ಪಾಲಾಕ್ಷ, ಸುರೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net