ಎಸ್‌ಡಿಪಿಐ ರಾಷ್ಟ್ರಧ್ಯಕ್ಷರ ಬಂಧನ ಖಂಡಿಸಿ ಪ್ರತಿಭಟನೆ

sdpi protest
Published on

ಮಡಿಕೇರಿ: ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಬಂಧನ ಖಂಡಿಸಿ ನಗರದ ಇಂದಿರಗಾಂಧಿ ವೃತ್ತದಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಎಸ್‌ಡಿಪಿಐ ಕಾರ್ಯಕರ್ತರುಗಳು ಕೇಂದ್ರ ಸರ್ಕಾರ ಮತ್ತು ಸರ್ಕಾರದ ಏಜೆನ್ಸಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ರಾಷ್ಟ್ರೀಯ ಅಧ್ಯಕ್ಷರ ಬಂಧನವು ಅಕ್ಷಮ್ಯ ಅಪರಾಧವಾಗಿದೆ. ಪಕ್ಷದ ಕಟ್ಟ ಕಡೆಯ ಕಾರ್ಯಕರ್ತರಿರುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲಾ ಮತ್ತು ಹೋರಾಟವನ್ನು ಇನ್ನಷ್ಟು ತೀವ್ರ ಗೊಳಿಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ, ಕುಶಾಲನಗರ ಘಟಕಾಧ್ಯಕ್ಷ ಝಕ್ರಿಯ, ಮಡಿಕೇರಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಭಾಷಾ, ವಿರಾಜಪೇಟೆ ಕ್ಷೇತ್ರಾ ಉಪಾಧ್ಯಕ್ಷರು ಯೂಸುಫ್, ಮಡಿಕೇರಿ ನಾಗರಾಧ್ಯಕ್ಷ ರಿಜ್ವಾನ್ ಸೇರಿದಂತೆ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net