ಪ್ರತಿಭಟನೆ ವೇಳೆ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ; 'ಕೈ' ಕಾರ್ಯಕರ್ತರಿಗೆ ಷರತ್ತುಬದ್ದ ಜಾಮೀನು

New Project(54)
Published on

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ವೇಳೆ ಕಾರಿಗೆ ಬೆಂಕಿ ಹಚ್ಚಿ ಬಂಧನಕ್ಕೆ ಒಳಗಾಗಿದ್ದ ಐವರಿಗೆ ಕೋರ್ಟ್ ಜಾಮೀನು ನೀಡಿದೆ.

ಶಾಂತಿನಗರದ ಇಡಿ ಕಚೇರಿ ಮುಂಭಾಗ ಕಾರಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರಾದ ಮಂಜುನಾಥ್, ಖುಷ್ಪಂತ್, ಆಗಸ್ಟಿನ್, ದಕ್ಷಿಣಾಮೂರ್ತಿ ಮತ್ತು ರಿಯಾನ್ ರಾಜು ಎಂಬುವರನ್ನು ಬಂಧಿಸಿದ್ದರು.

ಶುಕ್ರವಾರ 6ನೇ ಎಸಿಎಂಎಂ ಕೋರ್ಟ್‌ಗೆ ಆರೋಪಿಗಳನ್ನು ಹಾಜರುಪಡಿಸಿದ್ದರು. ಇದೇ ವೇಳೆ ಜಾಮೀನು ಕೋರಿ ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಸಮ್ಮತಿಸಿದ ನ್ಯಾಯಾಲಯ, ಐವರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು. 4 ದಿನಗಳ ಒಳಗಾಗಿ ಠಾಣಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿತು.

ಶೇಷಾದ್ರಿಪುರ ಸರ್ಕಲ್‌ನಲ್ಲಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಉಳಿದವರ ಬಂಧನಕ್ಕೆ ಬಲೆಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net