ಪಿಎಸ್​ಐ ಅಮಾನತಿಗೆ ಆಗ್ರಹಿಸಿ 7ನೇ ದಿನಕ್ಕೆ ಮುಂದುವರಿದ ಧರಣಿ

H04-LXR01- protest
Published on

ಲಕ್ಷ್ಮೇಶ್ವರ: ಪಟ್ಟಣದ ಪಿಎಸ್​ಐ ಈರಣ್ಣ ರಿತ್ತಿ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆ, ವಿವಿಧ ಹಿಂದು ಸಂಘಟನೆಗಳ ಕಾರ್ಯಕರ್ತರು, ಗೋಸಾವಿ ಸಮಾಜದವರು ತಹಸೀಲ್ದಾರ್ ಕಚೇರಿ ಮುಂದೆ ನಡೆಸುತ್ತಿರುವ ನಿರಂತರ ಧರಣಿ ಸತ್ಯಾಗ್ರಹ ಮಂಗಳವಾರ 7ನೇ ದಿನಕ್ಕೆ ಮುಂದುವರಿದಿದೆ.

ಸೋಮವಾರ ಧರಣಿ ಸ್ಥಳಕ್ಕೆ ಎಬಿವಿಪಿ ಕಾರ್ಯಕರ್ತರು ಬೇಟಿ ನೀಡಿ ಬೆಂಬಲ ಸೂಚಿಸಿದರು. ಧರಣಿ ವೇಳೆ ವೃದ್ಧೆಯೊಬ್ಬರು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ಪ್ರತಿಭಟನೆಯಲ್ಲಿ ಶ್ರೀರಾಮಸೇನಾ ಸಂಘಟನೆ ಮತ್ತು ಗೋಸಾವಿ ಸಮಾಜ ಹಾಗೂ ಎಬಿವಿಪಿ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net