ಟೋಲ್‌ಗೇಟ್‌ನಲ್ಲಿ ಅಪಘಾತ: ನೊಂದವರಿಗೆ ಪರಿಹಾರ ಆಗ್ರಹಿಸಿ 30ರಂದು ಪ್ರತಿಭಟನೆ

Protest Logo_RED
Published on

ಬೈಂದೂರು: ಶಿರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ನಿರ್ಮಾಣ ಗುತ್ತಿಗೆದಾರ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಶೀಘ್ರದಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾ.ಹೆ. ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು.

ಟೋಲ್‌ಗೇಟ್‌ನಲ್ಲಿ ಸಂಭವಿಸಿದ ಅಪಘಾತದಿಂದ ನೊಂದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜುಲೈ 30ರಂದು ಬೆಳಿಗ್ಗೆ 9.30ರಿಂದ ಶಿರೂರು ಟೋಲ್‌ಗೇಟ್ ಬಳಿ ಸ್ಥಳೀಯ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಗ್ರಾಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net