

ಮೈಸೂರು: ಮಹಾರಾಜ ಕಾಲೇಜಿಗೆ ಅಧ್ಯಾಕರನ್ನು ನೇಮಕ ಮಾಡಿ ತರಗತಿಗಳನ್ನು ಸರಿಯಾಗಿ ನಡೆಸುವಂತೆ ಒತ್ತಾಯಿಸಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಎಐಡಿಎಸ್‌ಒ ನೇತೃತ್ವದಲ್ಲಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕಾಲೇಜು ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಶಿಕ್ಷಕರ ನೇಮಕವಾಗದೆ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಹಾಗಾಗಿ ಅಗತ್ಯ ಶಿಕ್ಷರರನ್ನು ಕೂಡಲೇ ನೇಮಕ ಮಾಡಬೇಕು. ಗ್ರಂಥಾಲಯಕ್ಕೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು. ಕಾಲೇಜಿನಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ತರಗತಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಗ್ರಂಥಾಲಯದಲ್ಲಿ ಓದಲು ದಿನ ಪತ್ರಿಕೆಗಳನ್ನು ಒದಗಿಸಬೇಕು. ಸರಿಯಾಗಿ ತರಗತಿ ನಡೆಸದೇ ಇರುವುದರಿಂದ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸುಭಾಷ್, ಪದಾಧಿಕಾರಿಗಳಾದ ನಿತಿನ್, ಚಂದ್ರಿಕಾ, ಬೀರಪ್ಪ, ಅಭಿ, ವಿದ್ಯಾರ್ಥಿಗಳಾದ ಪುನೀತ್, ರಕ್ಷಿತ, ಸಿದ್ದರಾಜು, ಸತೀಶ್, ರಹಿಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.