ವಕ್ಫ ಹೆಸರು ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

IMG-20241112-WA0154
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಸರ್ಕಾರ ವಕ್ಫ ಹೆಸರಿನಲ್ಲಿ ರೈತರ ಜಮೀನು, ಮಠ, ಮಂದಿರಗಳ ಆಸ್ತಿ ಮತ್ತು ಸರ್ಕಾರದ ಆಸ್ತಿಗಳನ್ನು ಕಬಳಿಸುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್​, ಬಜರಂಗದಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಡಪಾ ಮೈದಾನದಿಂದ ಜುಬಿಲಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜುಬಿಲಿ ವೃತ್ತದಲ್ಲಿ ಸಮಾವೇಶಗೊಂಡು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರ ಹಾಗೂ ಸಚಿವ ಜಮೀರ್​ ಅಹಮದ್​ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಜಮೀನು, ಮಠ ಮಂದಿರಗಳ ಆಸ್ತಿ, ಪೂರ್ವಜರ ಆಸ್ತಿಗಳನ್ನು ಅಸಂವಿಧಾನಕವಾಗಿರುವ ವಕ್ಫ ಬೋರ್ಡಿಗೆ ವರ್ಗಾಯಿಸಿ ಲ್ಯಾಂಡ್​ ಜಿಹಾದ್​ಗೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಸಚಿವ ಜಮೀರ ಅಹ್ಮದ್​ ಖಾನ್​ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ರಾಮಕೃಷ್ಣ ಆಶ್ರಮದ ವಿಜಯಾನಂದ ಸರಸ್ವತಿ ಸ್ವಾಮೀಜಿ, ದೇವರ ಹುಬ್ಬಳ್ಳಿಯ ಶಿವಯೋಗೇಶ್ವರ ಸ್ವಾಮೀಜಿ, ಮಾಜಿ ಶಾಸಕಿ ಸೀಮಾ ಮಸೂತಿ, ಡಾ. ಎಸ್​.ಆರ್​ ರಾಮನಗೌಡರ, ಸೇವಾ ಭಾರತಿ ಟ್ರಸ್ಟ್​ ಅಧ್ಯಕ್ಷ ಮಂಜುನಾಥ ಮಕ್ಕಳಗೇರಿ, ಶಿವಾನಂದ ಸತ್ತಿಗೇರಿ, ಅನುದೀಪ ಕುಲಕರ್ಣಿ, ಶರಣು ಅಂಗಡಿ, ಸಿದ್ದು ಹಿರೇಮಠ, ಮಲ್ಲಿಕಾರ್ಜುನ ಅಸುಂಡಿ, ಶಂಕರ ಶೇಳಕೆ, ಗಣೇಶ ಕಟ್ಟಿ, ಮಹಾದೇವ ಕೋರಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net