ತೊಗರಿ ಬೆಳೆ ಹಾನಿಗೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

Protest demanding compensation for Togari crop damage
ಹುನಗುಂದ ಸಹಾಯಕ ಕೃಷಿ ಇಲಾಖೆ ಕಚೇರಿಯ ಮುಂದೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ನಾಗರಾಜ ಹೂಗಾರ, ವೀರನಗೌಡ ಪಾಟೀಲ, ಬಸನಗೌಡ ದಾದ್ಮಿ, ರುದ್ರಪ್ಪ ಬೆನಕನಡೋಣಿ ಇತರರಿದ್ದರು.
Published on

ಹುನಗುಂದ: ಕೃಷಿ ಇಲಾಖೆಯಿಂದ ರೈತರಿಗೆ ವಿತರಿಸಿದ ತೊಗರಿ ಬೀಜ ಕಳಪೆಯಾಗಿದ್ದು, ರೈತರಿಗೆ ಅಪಾರ ಹಾನಿಯಾಗಿದೆ. ಕೂಡಲೇ ಬೀಜ ನೀಡಿದ ಕಂಪನಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಹಾನಿಗೀಡಾದ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ಅಖಿಲ ಕರ್ನಾಟಕ ರಾಜ್ಯ ರೈತ ಸಂಘದಿಂದ ಹುನಗುಂದ ಸಹಾಯಕ ಕೃಷಿ ಇಲಾಖೆ ಕಚೇರಿಯ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಸಂಘದ ಅಧ್ಯಕ್ಷ ನಾಗರಾಜ ಹೂಗಾರ ಮಾತನಾಡಿ, ರೈತರಿಗೆ ಬೀಜ ವಿತರಿಸುವಾಗ ಸರಿಯಾದ ಮಾಹಿತಿ ನೀಡಬೇಕು. ಕಳಪೆ ಬೀಜ ವಿತರಿಸಿದ ಕಂಪನಿಯ ವಿರುದ್ಧ ಹಾಗೂ ಇದಕ್ಕೆ ಬೆಂಬಲ ನೀಡಿದ ಅಧಿಕಾರಿಗಳ ಮೇಲೂ ಸೂಕ್ತ ಕ್ರಮ ಜರುಗಿಸಬೇಕು. ನಷ್ಟಗೊಂಡ ರೈತರಿಗೆ ಬೆಳೆ ಪರಿಹಾರ ಅಥವಾ ಬೆಳೆ ವಿಮೆ ನೀಡುವಲ್ಲಿ ಏನಾದರೂ ಗೊಲ್‌ಮಾಲ್ ಮಾಡಿದರೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದಿಂದ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ರೈತ ಸಂಘದ ಗೌರವ ಅಧ್ಯಕ್ಷ ವೀರನಗೌಡ ಪಾಟೀಲ, ಬಸನಗೌಡ ದಾದ್ಮಿ, ರುದ್ರಪ್ಪ ಬೆನಕನಡೋಣಿ, ಬೀರಪ್ಪ ಕುರುಬರ, ಬಸವರಾಜ ಕುಂಬಾರ, ಸುರೇಶ ಕುಂಬಾರ, ಮಲಕಾಜಪ್ಪ ಕುಂಬಾರ, ಅಮರೇಶ ಬಾರಕೇರ, ಮುತ್ತಪ್ಪ ಬೆನಕಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net